

ಗುಂಡ್ಲುಪೇಟೆ: ತಾಲೂಕಿನ ಹಿರೀಕಾಟಿ ಗ್ರಾಮದಲ್ಲಿ ಕ್ರಷರ್‌ನಲ್ಲಿ ಬಾಲ ಕಾರ್ಮಿಕರನ್ನು ಬಳಸಿಕೊಂಡಿರುವುದು ಬೆಳಕಿಗೆ ಬಂದಿದೆ.
ಬೇಗೂರು ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮದ ಎಸ್‌ಎಲ್‌ವಿ ಸ್ಟೋನ್ ಕ್ರಷರ್‌ನಲ್ಲಿ ಬಾಲ ಕಾರ್ಮಿಕರು ಇರುವ ಬಗ್ಗೆ ಬಂದ ದೂರಿನನ್ವಯ ತಹಸೀಲ್ದಾರ್ ಎಂ.ಎಸ್.ತನ್ಮಯಿ ಪೊಲೀಸ್ ಮತ್ತು ಕಾರ್ಮಿಕ ಇಲಾಖೆಯ ಸಿಬ್ಬಂದಿಯೊಂದಿಗೆ ದಿಢೀರ್ ಭೇಟಿ ನೀಡಿದಾಗ ಅಲ್ಲಿ ಕೆಲಸ ಮಾಡುತ್ತಿದ್ದ 15 ಕಾರ್ಮಿಕರಲ್ಲಿ ಐವರು ಬಾಲ ಕಾರ್ಮಿಕರು ಪತ್ತೆಯಾದರು.
ಕೂಡಲೇ ಬಾಲ ಕಾರ್ಮಿಕರನ್ನು ವಶಕ್ಕೆ ಪಡೆದ ಅಧಿಕಾರಿಗಳು ಅವರನ್ನು ಬೇಗೂರು ಠಾಣೆಗೆ ಕರೆತಂದರು. ಇನ್ನು ಕ್ರಷರ್ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸುವಂತೆ ಕಾರ್ಮಿಕ ಇಲಾಖೆ ಇನ್‌ಸ್ಪೆಕ್ಟರ್ ನಾರಾಯಣ ಮೂರ್ತಿ ಅವರಿಗೆ ಸೂಚನೆ ನೀಡಲಾಯಿತು.
ಕಾರ್ಮಿಕ ಇಲಾಖೆಯ ಗಣೇಶ್, ಸಹಾಯಕ ಸಬ್ ಇನ್‌ಸ್ಪೆಕ್ಟರ್ ಪ್ರಸನ್ನಮೂರ್ತಿ ಇದ್ದರು.