ಅಜಿತ ನಾಣಯ್ಯಗೆ ಐದು ಚಿನ್ನದ ಪದಕ

11.npk-1
ನಾಪೋಕ್ಲು ವಿನ ಅಜಿತ ನಾಣಯ್ಯ.
Published on

ನಾಪೋಕ್ಲು: ಮೂಡಬಿದರೆಯಲ್ಲಿ ಇತ್ತೀಚೆಗೆ ನಡೆದ ಕ್ರೀಡಾಕೂಟದಲ್ಲಿ ನಾಪೋಕ್ಲು ಗ್ರಾಮದ ಅಜಿತ ನಾಣಯ್ಯ ಐದು ಚಿನ್ನದ ಪದಕಗಳನ್ನು ಗೆದ್ದಿದ್ದಾರೆ.

ಐವತ್ತು ವರ್ಷ ಮೇಲ್ಪಟ್ಟವರಿಗಾಗಿ ನಡೆದ ಸ್ಪರ್ಧೆಯಲ್ಲಿ 100, 200, 400 ಮೀ. ಓಟ, ಭಾರದ ಗುಂಡು ಎಸೆತ ಮತ್ತು 400 ಮೀ. ನಡಿಗೆಯಲ್ಲಿ ಪ್ರಥಮ ಬಹುಮಾನ ಗಳಿಸುವ ಮೂಲಕ ಅಜಿತ್ ಚಿನ್ನದ ಪದಕ ಪಡೆದಿದ್ದಾರೆ. ಕುಲ್ಲೇಟಿರ ಅಜಿತ್ ನಾಣಯ್ಯ ಮಡಿಕೇರಿ ರೋಟರಿ ಮಿಸ್ಟಿ ಹಿಲ್ ಸದಸ್ಯ.

ರೋಟರಿ ಜಿಲ್ಲೆ 31 81ರ ಕೊಡಗು, ಮೈಸೂರು, ದಕ್ಷಿಣ ಕನ್ನಡ ಮತ್ತು ಚಾಮರಾಜನಗರದ ಸ್ಪರ್ಧಿಗಳು ಪಾಲ್ಗೊಂಡಿದ್ದರು. ಮೂಡಬಿದರೆಯ ಆಳ್ವಾಸ್ ಕಾಲೇಜಿನ ಅಥ್ಲೆಟಿಕ್ಸ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಜಿತ್ ನಾಣಯ್ಯ ಬಹುಮಾನ ಪಡೆದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net