ಮೇಲಾಟ ಸ್ಪರ್ಧೆಯಲ್ಲಿ ಚೆನ್ನಮ್ಮಗೆ 5 ಚಿನ್ನ

WhatsApp Image 2023-11-10 at 7.40.09 PM
Published on

ಧಾರವಾಡ: ಮಾಸ್ಟರ್ ಗೇಮ್ಸ್ ಅಸೋಸಿಯೇಶನ್ ಆಫ್ ಕರ್ನಾಟಕದಿಂದ ಇತ್ತೀಚೆಗೆ ನಗರದ ಡಾ. ಆರ್.ಎನ್. ಶೆಟ್ಟಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕರ್ನಾಟಕ ಓಪನ್ ನ್ಯಾಷನಲ್ ಮಾಸ್ಟರ್ಸ್ ಗೇಮ್ಸ್- 2023 ಕ್ರೀಡಾಕೂಟದ ಮೇಲಾಟಗಳಲ್ಲಿ ಪಾಲ್ಗೊಂಡಿದ್ದ ಚೆನ್ನಮ್ಮ ಹೆಡೆ 5 ಚಿನ್ನದ ಪದಕಗಳನ್ನು ತಮ್ಮದಾಗಿಸಿಕೊಂಡರು.
70 ವರ್ಷ ವಯೋಮಾನದ ವಿಭಾಗದಲ್ಲಿ ಚೆನ್ನಮ್ಮ ಹೆಡೆ ಅವರು 400 ಮೀ., 300 ಮೀ. ಹಾಗೂ 200 ಮೀ. ಓಟದ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದರು. ಜೊತೆಗೆ ತ್ರಿವಿಧ ಜಿಗಿತ (ಟ್ರಿಪಲ್ ಜಂಪಿ0ಗ್) ಮತ್ತು ಹ್ಯಾಮರ್ ಥ್ರೋ ಸ್ಪರ್ಧೆಗಳಲ್ಲಿ ಮೊದಲ ಸ್ಥಾನ ಪಡೆಯುವ ಮೂಲಕ 5 ಚಿನ್ನದ ಪದಕಗಳಿಗೆ ಕೊರಳೊಡ್ಡಿದರು. ನಿವೃತ್ತ ಅಧ್ಯಾಪಕಿಯಾಗಿರುವ ಇವರು ಆರಂಭದಿ0ದಲೂ ಕ್ರೀಡೆಗಳಲ್ಲಿ ವಿಶೇಷ ಸಾಧನೆ ತೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net