ಕಾರ್ನಾಡ್ ವಾರದ ಸಂತೆಗೆ ನಪಂ ಮುಖ್ಯಾಧಿಕಾರಿ ದಾಳಿ: ಐದು ಕೆ.ಜಿ ನಿಷೇಧಿತ ಪ್ಲಾಸ್ಟಿಕ್ ವಶ

Plastic Raid
Published on

ಮೂಲ್ಕಿ: ಕಾರ್ನಾಡ್‌ನಲ್ಲಿ ವಾರದ ಸಂತೆಗೆ ನಗರ ಪಂಚಾಯಿತಿ ಮುಖ್ಯಾಧಿಕಾರಿ ಎನ್.ಎಂ.ಮೇಸ್ತ ಶನಿವಾರ ದಾಳಿ ನಡೆಸಿದ್ದು, ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡು ಸಂತೆ ಅಂಗಡಿ ಮಾಲೀಕರಿಗೆ ಎಚ್ಚರಿಕೆ ನೀಡಿದ್ದಾರೆ. ಅಂಗಡಿಯವರಿಂದ ಸುಮಾರು ಐದು ಕೆ.ಜಿ ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಳ್ಳಲಾಗಿದ್ದು, ಪ್ರಥಮ ಹಂತವಾಗಿ ಎಚ್ಚರಿಕೆ ನೀಡಲಾಗಿದೆ.

ಎನ್.ಎಂ.ಮೇಸ್ತ ಮಾತನಾಡಿ, ನಿಷೇಧಿತ ಪ್ಲಾಸ್ಟಿಕ್‌ನಿಂದ ಪರಿಸರಕ್ಕೆ ಹಾನಿ ಹಾಗೂ ಆರೋಗ್ಯಕ್ಕೆ ದುಷ್ಪರಿಣಾಮವಾಗುತ್ತದೆ. ಸರ್ಕಾರದ ಆದೇಶದಂತೆ ನಗರ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ನಿಷೇಧ ಕಡ್ಡಾಯವಾಗಿ ಜಾರಿಯಲ್ಲಿದ್ದು, ಮುಂದಿನ ದಿನಗಳಲ್ಲಿ ನಿಷೇಧಿತ ಪ್ಲಾಸ್ಟಿಕ್ ಮಾರಾಟ ಮಾಡಿದರೆ ದಂಡ ಹಾಗೂ ಸೂಕ್ತ ಕ್ರಮಗಳನ್ನು ಕೈಗೊಳ್ಳುವ ಮೂಲಕ ಜನಜಾಗೃತಿ ಮೂಡಿಸುವ ಕೆಲಸವಾಗಲಿದೆ ಎಂದರು.

ನಪಂ ಆರೋಗ್ಯ ನಿರೀಕ್ಷಕಿ ಲಿಲ್ಲಿ ನಾಯರ್, ಕಂದಾಯ ಅಧಿಕಾರಿ ಅಶೋಕ್, ಸಿಬ್ಬಂದಿ ಕಿಶೋರ್, ಅಜಯ್, ಹರೀಶ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net