ಕಾರು-ಲಾರಿ ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ಐವರು ಸಾವು, ಓರ್ವ ಗಂಭೀರ

CTR Road Accident
Published on

ಚಿತ್ರದುರ್ಗ: ಇನ್ನೋವಾ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಮೃತಪಟ್ಟು, ಒಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಐರಾವತ ಹೋಟೆಲ್ ಬಳಿ ನಡೆದಿದೆ.

ಚಿತ್ರದುರ್ಗ-ದಾವಣಗೆರೆ ರಿಂಗ್​ರೋಡ್​ನಲ್ಲಿ ಈ ಅಪಘಾತ ಸಂಭವಿಸಿದ್ದು, ಇನ್ಣೋವಾ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಧ್ಯಾಹ್ನ 12:15ರ ಸುಮಾರಿಗೆ ಮೆದೇಹಳ್ಳಿ ಸಮೀಪವಿರುವ ಐರಾವತ ಹೋಟೆಲ್ ಬಳಿ ಈ ಅಪಘಾತ ಸಂಭವಿಸಿದ್ದು, ಪೊಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹಗಳನ್ನು ಅಧಿಕಾರಿಗಳು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

CTR Road Accident
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net