ಪಂಚ ಯೋಜನೆಗಳು ಬಡವರಿಗೆ ಅನುಕೂಲ

ಹೊಸಪೇಟೆ ಕೇಂದ್ರ ಬಸ್ ನಿಲ್ದಾಣದಲ್ಲಿ ಹಮ್ಮಿಕೊಂಡಿದ್ದ ಸರ್ಕಾರದ ಯೋಜನೆಗಳು ಮತ್ತು ಸಾಧನೆಗಳನ್ನು ಬಿಂಬಿಸುವ ವಸ್ತು ಪ್ರದರ್ಶನಕ್ಕೆ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಚಾಲನೆ ನೀಡಿದರು. ವಾರ್ತಾಧಿಕಾರಿ ಬಿ.ಧನಂಜಯಪ್ಪ, ಹುಡಾ ಅಧ್ಯಕ್ಷ ಎಚ್.ಎನ್.ಎಫ್.ಇಮಾಮ್ ನಿಯಾಜಿ, ವಾರ್ತಾ ಇಲಾಖೆ ಸ್ಥಾನಿಕಾಧಿಕಾರಿ ಕೆ.ರಾಮಾಂಜನೇಯ ಇತರರಿದ್ದರು.

Published on

ಹೊಸಪೇಟೆ: ಸರ್ಕಾರದ ಎರಡು ವರ್ಷದ ಸಾಧನೆಗಳ ಸಮಾವೇಶವನ್ನು ನಗರದಲ್ಲಿ ಆಯೋಜನೆ ಮಾಡಿ ಯಶಸ್ವಿಗೊಳಿಸಿರುವುದು ತೃಪ್ತಿ ನೀಡಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಹೇಳಿದರು.

ನಗರದ ಕೇಂದ್ರ ಬಸ್‌ನಿಲ್ದಾಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಸರ್ಕಾರದ ಯೋಜನೆಗಳು ಮತ್ತು ಸಾಧನೆಗಳನ್ನು ಬಿಂಬಿಸುವ ವಸ್ತು ಪ್ರದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದರು. ರಾಜ್ಯ ಸರ್ಕಾರ ಜಾರಿಗೊಳಿಸಿದ ಅನ್ನಭಾಗ್ಯ ಯೋಜನೆಯಿಂದ ಬಡವರು, ಕೂಲಿಕಾರ್ಮಿಕರಿಗೆ, ಗೃಹಲಕ್ಷ್ಮಿ ಯೋಜನೆಯಿಂದ ಮಹಿಳೆಯರಿಗೆ ಪ್ರತಿ ತಿಂಗಳ ಎರಡು ಸಾವಿರ ರೂ., ಗೃಹ ಜ್ಯೋತಿ ಯೋಜನೆಯಿಂದ ಅರ್ಹ ಫಲಾನುಭವಿಗಳಿಗೆ ಮತ್ತು ಯುವನಿಧಿ ಯೋಜನೆಯಿಂದ ನಿರುದ್ಯೋಗಿ ಯುವಕರಿಗೆ ಅನುಕೂಲವಾಗಿದೆ. ಶಕ್ತಿ ಯೋಜನೆ ಜಾರಿಯಾದಾಗಿನಿಂದ ಜಿಲ್ಲೆಯ ಸಾರಿಗೆ ಸಂಸ್ಥೆ ಪ್ರತಿ ತಿಂಗಳು ಕೋಟ್ಯಂತರ ರೂ. ಆದಾಯ ಗಳಿಸುತ್ತಿದ್ದು, ಹೆಚ್ಚು ಬಲವರ್ಧನೆಯಾಗಿದೆ ಎಂದು ತಿಳಿಸಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಬಿ.ಧನಂಜಯಪ್ಪ ಮಾತನಾಡಿ, ಸಾರ್ವಜನಿಕರಿಗೆ ಹೆಚ್ಚಿನ ಮಾಹಿತಿ ಒದಗಿಸುವ ನಿಟ್ಟಿನಲ್ಲಿ ಬಸ್ ನಿಲ್ದಾಣಗಳಲ್ಲಿ ವಸ್ತು ಪ್ರದರ್ಶನ ಮಳಿಗೆಯನ್ನು ಏರ್ಪಡಿಸಲಾಗಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net