

ಚಿತ್ರದುರ್ಗ: ಹೊಸಹಟ್ಟಿ ಗ್ರಾಮದಲ್ಲಿ ವಾಂತಿ-ಭೇದಿಯಿಂದ ಸೋಮವಾರ ಐವರು ಅಸ್ವಸ್ಥರಾಗಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈವರೆಗೂ ಅಸ್ವಸ್ಥರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.
ಕವಾಡಿಗರಹಟ್ಟಿಯಲ್ಲಿ ಯಾರಲ್ಲೂ ವಾಂತಿ-ಭೇದಿ ಕಾಣಿಸಿಕೊಂಡಿಲ್ಲ. ಈ ಹಿಂದೆ ಚಿಕಿತ್ಸೆಗೆ ದಾಖಲಾಗಿದ್ದವರ ಪೈಕಿ ಇನ್ನೂ 11 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಅಧಿಕಾರಿ ಡಾ.ಆರ್.ರಂಗನಾಥ್ ತಿಳಿಸಿದ್ದಾರೆ.