

ರಾಮನಗರ: ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷಾ ಕರ್ತವ್ಯ ನಿರ್ವಹಿಸುವ ಗಣತಿದಾರರಿಗೆ ತಮ್ಮ ತಮ್ಮ ಸ್ಥಳದಲ್ಲಿ ಮಾರ್ಪಾಡು ಮಾಡುವಂತೆ ಆಗ್ರಹಿಸಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಬುಧವಾರ ಉಪ ವಿಭಾಗಾಧಿಕಾರಿ ಬಿನೋಯ್ ಅವರಿಗೆ ಮನವಿ ಸಲ್ಲಿಸಿದರು.
ಈ ವೇಳೆ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ.ಸತೀಶ್ ಮಾತನಾಡಿ, ಹಿಂದುಳಿದ ವರ್ಗದ ಆಯೋಗದ ವತಿಯಿಂದ ನಡೆಸಲಾಗುತ್ತಿರುವ ಸಾಮಾಜಿಕ, ಶೈಕ್ಷಣಿಕ & ಆರ್ಥಿಕ ಸಮೀಕ್ಷೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ. ಈ ಸಮೀಕ್ಷೆಯನ್ನು ಯಶಸ್ವಿಯಾಗಿ ಮಾಡಿಕೊಡಲು ಗಣತಿದಾರರಿಗೆ ತಮ್ಮ ತಮ್ಮ ಸ್ಥಳದಲ್ಲಿಯೇ ಸಮೀಕ್ಷೆ ಕಾರ್ಯ ಯಶಸ್ವಿಯಾಗಿ ಮಾಡಿಕೊಡಲು ಅನುಕೂಲ ಮಾಡಿಕೊಡಬೇಕು ಎಂದರು.
ರಜಾ ಅವಧಿಯಲ್ಲಿ ಕರ್ತವ್ಯ ನಿರ್ವಹಿಸಿದ ಗಣತಿದಾರರಿಗೆ, ಮೇಲ್ವಿಚಾರಕರಿಗೆ ಗಳಿಕೆ ರಜೆ ಮಂಜೂರು ಮಾಡಿಕೊಡಬೇಕು. ಸಮೀಕ್ಷೆ ಕಾರ್ಯ ಪೂರ್ವಗೊಳಿಸಲು ಹೆಚ್ಚಿನ ಕಾಲಾವಕಾಶ 6 ಹಾಗೂ ಸರ್ವರ್ ವೇಗವನ್ನು ಹೆಚ್ಚಿಸಬೇಕು ಎಂದರು. ಗಣತಿಗೆ ಒಳಪಡುವ ಕುಟುಂಬದ ಸದಸ್ಯರುಗಳಿಗೆ ಅಗತ್ಯ ದಾಖಲೆಗಳನ್ನು ಗಣತಿದಾರರಿಗೆ ನೀಡಬೇಕೆಂಬ ಬಗ್ಗೆ ಗ್ರಾಮ ಸಹಾಯಕರುಗಳ ಮೂಲಕ ಜಾಗೃತಿ ಮೂಡಿಸಲು ನಿರ್ದೇಶನ ನೀಡಬೇಕೆಂದು ಮನವಿ ಮಾಡಿದರು.
ಈ ವೇಳೆ ಸಂಘದ ಪದಾಧಿಕಾರಿಗಳಾದ ಶಿವ ಸ್ವಾಮಿ ಶಂಕರಾ ನಂದ, ಜೆ.ಎಲ್ ಗಿರೀಶ್, ಜೆ.ಪಿ ಸತೀಶ್ ಪಾದ್ರಳ್ಳಿ, ರಾಮಚಂದ್ರಯ್ಯ, ಬಿ ವೀರೇಂದ್ರ ಕುಮಾರ್, ರಾಮಕೃಷ್ಣಯ್ಯ ಬಿ ಶಿವಕುಮಾರ್ ಇದ್ದರು.