

ಕೂಡ್ಲಿಗಿ: ತಾಲೂಕಿನ ಖಾಸಗಿ ಅಂಗಡಿಗಳಲ್ಲಿ ಬಿತ್ತನೆ ಬೀಜ, ರಸಗೊಬ್ಬರವನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಸೋಮವಾರ ಉಪ ತಹಸೀಲ್ದಾರ್ ಕೆ.ಚಂದ್ರಶೇಖರ್‌ಗೆ ಮನವಿ ಸಲ್ಲಿಸಿದರು.
ಇದನ್ನೂ ಓದಿ: ಬಿತ್ತನೆ ಬೀಜ ವಿತರಣೆಗೆ 13 ಹೆಚ್ಚುವರಿ ಕೇಂದ್ರ ಸ್ಥಾಪನೆ
ಸಂಘದ ತಾಲೂಕು ಅಧ್ಯಕ್ಷ ಬಾಷಾ ಸಾಬ್ ಮಾತನಾಡಿ, ತಾಲೂಕಿನಲ್ಲಿ ಉತ್ತಮ ಮಳೆಯಾಗಿದ್ದು, ರೈತರು ಬಿತ್ತನೆಗೆ ಮುಂದಾಗಿದ್ದಾರೆ. ಆದರೆ ಕೆಲ ಖಾಸಗಿ ಅಂಗಡಿಗಳಲ್ಲಿ ಸರ್ಕಾರ ನಿಗದಿ ಮಾಡಿದ ದರಕ್ಕಿಂತ ಹೆಚ್ಚಿನ ಬೆಲೆಗೆ ಬಿತ್ತನೆ ಬೀಜ, ರಸಗೊಬ್ಬರ ಮಾರಾಟ ಮಾಡುತ್ತಿದ್ದಾರೆ.
ಆದ್ದರಿಂದ ಅಂಗಡಿ ಮಾಲೀಕರನ್ನು ಕರೆಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡದಂತೆ ಸೂಚಿಸಬೇಕು. ಹೆಚ್ಚಿನ ಬೆಲೆಗೆ ಮಾರಾಟ ಮಾಡಿರುವುದು ಕಂಡು ಬಂದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಪ್ರಮುಖರಾದ ಬಡೇಲಡಕು ಗ್ರಾಮದ ಜೆ.ನಾಗರಾಜ, ಉಪಾಧ್ಯಕ್ಷ ಶೇಖರ್ ನಾಯ್ಕ, ಪಿ.ಬಾಷಾಸಾಬ್, ಚಾಂದ್‌ಬಾಷಾ, ಕಾಸಿಂ ಸಾಬ್ ಇತರರಿದ್ದರು.