

ಹುಬ್ಬಳ್ಳಿ : ಇಲ್ಲಿನ ಅರವಿಂದ ನಗರದ ಬಿಜೆಪಿ ಮಹಾನಗರ ಜಿಲ್ಲಾ ಕಾರ್ಯಾಲಯದಲ್ಲಿ ಎಪಿಎಂಸಿ ಕಾರ್ವಿುಕ ಕರೆಪ್ಪ ಅಂಬಿಗೇರ ಹಾಗೂ ಆಟೋ ಚಾಲಕ ಮಂಜುನಾಥ ಚವಡಿ ಅವರು ಧ್ವಜಾರೋಹಣ ನೆರವೇರಿಸುವ ಮೂಲಕ ಸ್ವಾತಂತ್ರ್ಯ ದಿನ ಆಚರಿಸಲಾಯಿತು.
ಧ್ವಜವಂದನೆ ಸ್ವೀಕರಿಸಿ ಮಾತನಾಡಿದ ಶಾಸಕ ಮಹೇಶ ಟೆಂಗಿನಕಾಯಿ, ಭಾರತ ವಿಶ್ವಗುರು ಆಗುವತ್ತ ದಾಪುಗಾಲಿಟ್ಟಿದೆ ಎಂದರು.
ಅಮೆರಿಕ ಅಧ್ಯಕ್ಷ ಟ್ರಂಪ್ ಅವರು ಭಾರತದ ಮೇಲೆ ಹೆಚ್ಚಿನ ಸುಂಕ ವಿಧಿಸುತ್ತಿದ್ದಾರೆ. ಆದರೆ, ಇದರಿಂದ ಹೆಚ್ಚಿನ ತೊಂದರೆಯಾಗುವುದು ಅಮೆರಿಕಕ್ಕೆ. ಅಮೆರಿಕದಿಂದ ಆಮದು ಮಾಡಿಕೊಳ್ಳುತ್ತಿದ್ದ ಹೆಚ್ಚಿನ ವಸ್ತುಗಳನ್ನು ಭಾರತದಲ್ಲಿಯೇ ಉತ್ಪಾದಿಸಲು ಪ್ರಧಾನಿ ನರೇಂದ್ರ ಮೋದಿ ಕ್ರಮ ಕೈಗೊಳ್ಳುವ ಭರವಸೆ ಇದೆ ಎಂದರು.
ಮಹಾಪೌರರಾದ ಜ್ಯೋತಿ ಪಾಟೀಲ, ಬಿಜೆಪಿ ಮಹಾನಗರ ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಗಿ, ನಿಂಗಪ್ಪ ಸುತಗಟ್ಟಿ, ಶಿವು ಮೆಣಸಿನಕಾಯಿ, ಬಸವರಾಜ ಗರಗ, ಮಹೇಂದ್ರ ಕೌತಾಳ, ಅಶೋಕ ವಾಲ್ಮೀಕಿ, ರಾಜು ಕೋರ್ಯುಣಮಠ, ನಾಗರತ್ನಾ ಬಳ್ಳಾರಿ, ಶೋಭಾ ನಾಕೋಡ, ಭಾರತಿ ಯಲಕಾನ, ಪ್ರತಿಭಾ ಪವ್ಹಾರ, ಸವಿತಾ ಚವ್ಹಾಣ ಹಾಗೂ ಇತರರು ಇದ್ದರು.