ನರಗುಂದ ತಾಲೂಕು ಕ್ರೀಡಾಂಗಣದಲ್ಲಿ ಧ್ವಜಾರೋಹಣ

flag
Published on

ನರಗುಂದ: ತಾಲೂಕು ಆಡಳಿತ ಹಾಗೂ ಪುರಸಭೆ ಆಶ್ರಯದಲ್ಲಿ ಜ. 26ರಂದು ಪ್ರಜಾರಾಜ್ಯೋತ್ಸವ ಅಂಗವಾಗಿ ಸಾರ್ವಜನಿಕರ ಧ್ವಜಾರೋಹಣ ಕಾರ್ಯಕ್ರಮ ತಾಲೂಕು ಕ್ರೀಡಾಂಗಣದಲ್ಲಿ ಬೆಳಗ್ಗೆ 9 ಗಂಟೆಗೆ ಜರುಗಲಿದೆ.

ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಉಪಸ್ಥಿತಿಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಶಾಸಕ ಸಿ.ಸಿ. ಪಾಟೀಲ ಉದ್ಘಾಟಿಸುವರು.

ಮುಖ್ಯ ಅತಿಥಿಗಳಾಗಿ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ, ಸಂಸದ ಪಿ.ಸಿ. ಗದ್ದಿಗೌಡ್ರ, ವಿಧಾನಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಪ್ರದೀಪ ಶೆಟ್ಟರ, ಪುರಸಭೆ ಅಧ್ಯಕ್ಷೆ ಅನ್ನಪೂರ್ಣ ಯಲಿಗಾರ, ತಾಪಂ ಇಒ ಎಸ್.ಕೆ. ಇನಾಮದಾರ, ಸಿಪಿಐ ಮಂಜುನಾಥ ನಡುವಿನಮನಿ, ಪುರಸಭೆ ಮುಖ್ಯಾಧಿಕಾರಿ ಪಿ.ಕೆ. ಗುಡದಾರಿ, ಪುರಸಭೆ ಸದಸ್ಯರು, ಗ್ರಾಮ ಪಂಚಾಯಿತಿ ಸದಸ್ಯರು, ಜನಪ್ರತಿನಿಧಿಗಳು ಭಾಗವಹಿಸುವರು. ತಹಸೀಲ್ದಾರ ಶ್ರೀಶೈಲ ತಳವಾರ ದ್ವಜಾರೋಹಣ ನೆರವೇರಿಸುವರು ಎಂದು ತಾಲೂಕು ಕಚೇರಿ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net