ಗಣರಾಜ್ಯೋತ್ಸವ ಧ್ವಜಾರೋಹಣ

WEB LOGO
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಜಿಲ್ಲಾಡಳಿತ ವತಿಯಿಂದ ಜ. 26ರಂದು ಆರ್​.ಎನ್​.ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ 76ನೇ ಗಣರಾಜ್ಯೋತ್ಸವ ಕಾರ್ಯಕ್ರಮ ಆಯೋಜಿಸಿದ್ದು, ಬೆಳಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್​ ರಾಷ್ಟ್ರ ಧ್ವಜಾರೋಹಣ ನೇರವೇರಿಸುವರು.

ಧ್ವಜಾರೋಹಣ ಬಳಿಕ ವಿವಿಧ ದಳಗಳ ಪರಿವೀಕ್ಷಣೆ, ಜನತೆಗೆ ಗಣರಾಜ್ಯೋತ್ಸವದ ಸಂದೇಶ ನೀಡಿದ ಬಳಿಕ ವಿವಿಧ ದಳಗಳಿಂದ ಗೌರವ ರಕ್ಷೆ ಸ್ವೀಕರಿಸುವರು.

ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ವಿಧಾನ ಪರಿಷತ್​ ಸಭಾಪತಿ ಬಸವರಾಜ ಹೊರಟ್ಟಿ ಉಪಸ್ಥಿತರಿರುವರು. ಕರ್ನಾಟಕ ವಿಧಾನ ಪರಿಷತ್​ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್​, ಶಾಸಕರಾದ ವಿನಯ ಕುಲಕರ್ಣಿ, ಅಬ್ಬಯ್ಯ ಪ್ರಸಾದ, ಎನ್​.ಎಚ್​ ಕೋನರಡ್ಡಿ, ಮಹೇಶ ಟೆಂಗಿನಕಾಯಿ, ಎಂ.ಆರ್​. ಪಾಟೀಲ, ಎಸ್​.ವಿ.ಸಂಕನೂರ, ಪ್ರದಿಪ ಶೆಟ್ಟರ್​, ಮೇಯರ್​ ರಾಮಪ್ಪ ಬಡಿಗೇರ, ಜಿಲ್ಲಾಧಿಕಾರಿ ದಿವ್ಯ ಪ್ರಭು, ಪೊಲೀಸ್​ ಆಯುಕ್ತ ಎನ್​. ಶಶಿಕುಮಾರ, ಎಸ್ಪಿ ಡಾ. ಗೋಪಾಲ ಬ್ಯಾಕೋಡ, ಪಾಲಿಕೆ ಆಯುಕ್ತರು, ಜಿಪಂ ಸಿಇಒ, ವಿವಿಧ ಇಲಾಖೆ ಅಧಿಕಾರಿಗಳು ಆಗಮಿಸುವರು. ಶಾಸಕ ಅರವಿಂದ ಬೆಲ್ಲದ ಅಧ್ಯಕ್ಷತೆ ವಹಿಸುವರು.

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಜಿಲ್ಲೆಯ ಸಾಧಕರನ್ನು ಸಚಿವರು ಸನ್ಮಾನಿಸುವರು. ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ಸಂಜೆ 5 ಗಂಟೆಗೆ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್​ ಸಾಂಸ್ಕೃತಿಕ ಭವನದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net