ಸಹಕಾರ ಸಂಘದಲ್ಲಿ ಧ್ವಜಾರೋಹಣ

15 yelandur 03.
Published on

ಯಳಂದೂರು: ತಾಲೂಕಿನ ಅಗರ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಗುರುವಾರ ಸ್ವಾತಂತ್ರ್ಯ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.


ಗಾಂಧೀಜಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅಧ್ಯಕ್ಷ ಎ.ಬಿ.ಜಯಶಂಕರ್ ಪುಷ್ಪ್ಪಾರ್ಚನೆ ನೆರವೇರಿಸಿದರು. ಗಾಂಧೀಜಿ, ನೆಹರು, ಸುಭಾಷ್ ಚಂದ್ರಬೋಸ್, ಡಾ.ಅಂಬೇಡ್ಕರ್ ಅವರ ಆದರ್ಶ ಗುಣಗಳನ್ನು ಇಂದಿನ ಯುವ ಪೀಳಿಗೆ ಅರಿಯಬೇಕಿದೆ ಎಂದು ತಿಳಿಸಿದರು.
ಸಂಘದ ಉಪಾಧ್ಯಕ್ಷ ನಾಗರಾಜು, ನಿರ್ದೇಶಕರಾದ ವೆಂಕಟೇಶ್, ವಿ.ಸೋಮಣ್ಣ, ಕೃಷ್ಣಮೂರ್ತಿ, ಮಹದೇವಯ್ಯ, ಕಾರ್ಯದರ್ಶಿ ಶಶಿ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net