

ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ಆ. 15ರಂದು ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲಾಗುತ್ತದೆ.
ನಗರದ ಈದ್ಗಾ ಮೈದಾನದಲ್ಲಿ ಬೆಳಗ್ಗೆ 7.45ಕ್ಕೆ ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ, ಮಹಾನಗರ ಪಾಲಿಕೆ ಮುಖ್ಯ ಕಚೇರಿಯಲ್ಲಿ ಬೆಳಗ್ಗೆ 8.30ಕ್ಕೆ ಮಹಾಪೌರ ರಾಮಪ್ಪ ಬಡಿಗೇರ ಹಾಗೂ ಪಾಲಿಕೆಯ ಧಾರವಾಡ ಕಚೇರಿಯಲ್ಲಿ ಉಪ ಮಹಾಪೌರರಾದ ದುರ್ಗಮ್ಮ ಬಿಜವಾಡ ಧ್ವಜಾರೋಹಣ ನೆರವೇರಿಸುವರು.