

ಗುಂಡ್ಲುಪೇಟೆ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾ
ಸಿಕ್ಯೂಷನ್‌ಗೆ ಅನುಮತಿ ನೀಡಿರುವುದರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ಬೀದಿಗಿಳಿದು ಪ್ರತಿಭಟನೆ ನಡೆಸಿದರು.
ಸಂಜೆ ತಾಲೂಕು ಕಚೇರಿಯ ಎದರು ಪ್ರತಿಭಟನೆ ನಡೆಸಿದ ಯುವ ಘಟಕದ ಪದಾಧಿಕಾರಿಗಳು ಸಂಜೆ ಪ್ರಮುಖ ಬೀದಿಗಳಲ್ಲಿ ಪಂಜಿನ ಮೆರವಣಿಗೆ ನಡೆಸಿ ರಾಜ್ಯಪಾಲರ ವಾಜಕ್ಕೆ ಒತ್ತಾಯಿಸಿದರು.
ಸಂಜೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಿದ ಕಾರ್ಯಕರ್ತರು ರಾಜ್ಯಪಾಲರ ನಡೆ ವಿರುದ್ಧ ಘೋಷಣೆ ಕೂಗಿದರು. ರಾಜ್ಯಪಾಲರು ದುರುದ್ದೇಶದಿಂದ ಕ್ರಮಕ್ಕೆ ಮುಂದಾಗಿದ್ದಾರೆ. ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿಗೆ ಕೆಟ್ಟ ಹೆಸರು ತರುವ ಉದ್ದೇಶದಿಂದ ಹೀಗೆ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ರಾಷ್ಟ್ರಪತಿಗೆ ತಹಸೀಲ್ದಾರ್ ಟಿ.ರಮೇಶ್ ಬಾಬು ಮೂಲಕ ಮನವಿಪತ್ರ ಸಲ್ಲಿಸಿದರು.