ಇಡಿ ಅಧಿಕಾರಗಳ ದುರ್ಬಳಕೆ ಎಂದು ಆರೋಪಿಸಿ ಕಾಂಗ್ರೆಸ್ ನಿಂದ ಪಂಜಿನ ಮೆರವಣಿಗೆ

19
Published on

ಮೈಸೂರು: ಕೇಂದ್ರ ಸರ್ಕಾರ ಇಡಿ ಸಂಸ್ಥೆಯ ಅಧಿಕಾರಗಳನ್ನು ತನ್ನ ಕೈಗೊಂಬೆಯನ್ನಾಗಿ ಮಾಡಿಕೊಂಡಿದೆ ಎಂದು ಆರೋಪಿಸಿ ಮೈಸೂರು ನಗರ ಕಾಂಗ್ರೆಸ್ ಸಮಿತಿಯಿಂದ ಶನಿವಾರ ಪಂಜಿನ ಮೆರವಣಿಗೆ ನಡೆಯಿತು.

ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಬಳಿ ಪಂಜಿನ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಇಡಿಯಲ್ಲಿ ಇಸಿಐಆರ್ ದೂರು ದಾಖಲು ಮಾಡಿರುವುದು ಕೇಂದ್ರದಲ್ಲಿ ಆಡಳಿತದಲ್ಲಿರುವ ಬಿಜೆಪಿ ಸರ್ಕಾರದ ಷಡ್ಯಂತ್ರೃವಾಗಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ಅವರನ್ನು ವಾಮಮಾರ್ಗದಿಂದ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಸಂಚು ಎಂದು ದೂರಿದರು.

ಸಿದ್ದರಾಮಯ್ಯ ಅವರು ಕರ್ನಾಟಕದ ಅತ್ಯಂತ ಜನಪ್ರಿಯ ಸಾಮಾಜಿಕ ಹೋರಾಟಗಾರ ಹಾಗೂ ನಾಯಕರಾಗಿದ್ದಾರೆ. ಅಹಿಂದ ವರ್ಗಗಳ ಹೋರಾಟಗಾರರಾಗಿದ್ದಾರೆ. ಈ ರೀತಿಯ ಜನನಾಯಕನನ್ನು ಇಡಿ, ಸಿಬಿಐ ತನಿಖೆಗೆ ಒಳಪಡಿಸಿ, ಮಾನಸಿಕವಾಗಿ ಕುಗ್ಗಿಸಲು ಹುನ್ನಾರ ನಡೆಸಿದೆ ಎಂದು ಟೀಕಿಸಿದರು.

ದಲಿತ ಮಹಾಸಭಾ ಅಧ್ಯಕ್ಷ ಎಸ್.ರಾಜೇಶ್, ಮುಖಂಡರಾದ ಮರಿದೇವಯ್ಯ ಶಿವರಾಮು, ಲೋಕೇಶ ಮಾದಾಪುರ, ಯೋಗೇಶ್ ಉಪ್ಪಾರ್, ರವಿನಂದನ್, ಪ್ರಕಾಶ್, ರವಿ, ಸಿದ್ದರಾಜು, ಎಸ್.ಎ.ರಹೀಮ್, ಶಿವರುದ್ರ, ನಂಜಪ್ಪ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net