ಮತದಾನ ಜಾಗೃತಿಗಾಗಿ ಕೊಳ್ಳೇಗಾಲದಲ್ಲಿ ಪಂಜಿನ ಮೆರವಣಿಗೆ

21-KGL PHOTO-2,
ಕಡ್ಡಾಯ ಮತದಾನ ಮಡುವ ಕುರಿತು ಕೊಳ್ಳೇಗಾಲದಲ್ಲಿ ಪಂಜಿನ ಮೆರವಣಿಗೆ ಮೂಲಕ ಜಾಗೃತಿ ಮೂಡಿಸಲಾಯಿತು. ಶ್ರೀನಿವಾಸ್, ಎ.ರಮೇಶ್, ಚೇತನ್ ಇತರರು ಇದ್ದರು.
Published on

ಕೊಳ್ಳೇಗಾಲ: ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕೆಂಬ ದೃಷ್ಟಿಯಿಂದ ಸ್ವೀಪ್ ಸಮಿತಿ ವತಿಯಿಂದ ಬುಧವಾರ ರಾತ್ರಿ ಪಂಜಿನ ಮೆರವಣಿಗೆ ನಡೆಯಿತು.

ತಾಲೂಕು ಪಂಚಾಯಿತಿ ಆವರಣದಿಂದ ಹೊರಟ ಮೆರವಣಿಗೆ ಪಟ್ಟಣದ ವಿವಿಧಡೆ ಸಾಗಿತು. ಈ ವೇಳೆ ಜನರಲ್ಲಿ ಮತದಾನ ಜಾಗೃತಿ ಮೂಡಿಸಲಾಯಿತು.
ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದ ತಾಲೂಕು ಪಂಚಾಯಿತಿ ಇಒ ಶ್ರೀನಿವಾಸ್, ಜಿಲ್ಲೆಯಲ್ಲಿ ಮತದಾನದ ಪ್ರಮಾಣ ಹೆಚ್ಚಿಸಲು ವಿವಿಧ ರೀತಿಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಎಲ್ಲರೂ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು. ಯಾರೂ ಮತದಾನದಿಂದ ದೂರ ಉಳಿಯಬಾರದೆಂಬ ಕಾರಣಕ್ಕೆ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಮತದಾನ ಸಂವಿಧಾನ ನೀಡಿರುವ ವಿಶೇಷ ಹಾಗೂ ಅಮೂಲ್ಯ ಹಕ್ಕು. ಆದ್ದರಿಂದ 18 ವರ್ಷ ತುಂಬಿದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಹೇಳಿದರು.

ನಗರಸಭೆ ಆಯುಕ್ತ ಎ.ರಮೇಶ್, ಸಮುದಾಯ ಸಂಘಟನಾ ಅಧಿಕಾರಿ ಪರಶಿವ, ನಗರಸಭಾ ಹೆಲ್ತ್ ಇನ್‌ಸ್ಪೆಕ್ಟರ್ ಚೇತನ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net