ಬೆಂಕಿಗಾಹುತಿಯಾದ ದವಸ ಧಾನ್ಯ, ಗೃಹೋಪಯೋಗಿ ವಸ್ತುಗಳು

20M.D.R.4
ಮದ್ದೂರು ತಾಲೂಕಿನ ಸೋಂಪುರ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿರುವುದು.
Published on

ಮದ್ದೂರು: ತಾಲೂಕಿನ ಸೋಂಪುರ ಗ್ರಾಮದಲ್ಲಿ ಸೋಮವಾರ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡ ಪರಿಣಾಮ ಮನೆಯಲ್ಲಿದ್ದ ದವಸ ಧಾನ್ಯ ಹಾಗೂ ಗೃಹೋಪಯೋಗಿ ವಸ್ತುಗಳು ಸುಟ್ಟುಹೋಗಿವೆ.

ಗ್ರಾಮದ ನಿವಾಸಿ ಲಿಂಗಣ್ಣ ಅವರಿಗೆ ಸೇರಿದ ಮನೆ ಇದಾಗಿದ್ದು, ಘಟನೆಯಿಂದಾಗಿ ಬಹುತೇಕ ಮನೆ ಸುಟ್ಟು ಹೋಗಿದೆ. ಘಟನೆ ವೇಳೆ ಮನೆಯಲ್ಲಿ ಯಾರು ಇಲ್ಲದ ಕಾರಣ ಅದೃಷ್ಟವಶಾತ್ ಯಾವುದೇ ಸಾವು-ನೋವು ಸಂಭವಿಸಿಲ್ಲ.

ಅಗ್ನಿಶಾಮಕ ದಳದ ಪ್ರಭಾರ ಅಧಿಕಾರಿ ಶಿವನಂದಯ್ಯ, ಸಿಬ್ಬಂದಿ ಶಿವಕುಮಾರ್, ಶಿವಾನಂದ ಕಂಬಾರ, ರಾಜು, ಪ್ರಶಾಂತ್ ಇತರರು ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಮೂಲಕ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net