ಪ್ರವಾಹದ ಮುನ್ನೆಚ್ಚರಿಕೆ ಇರಲಿ

web2
ಚಿಕ್ಕೋಡಿಯಲ್ಲಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ತಾಲೂಕು ನೋಡಲ್ ಅಧಿಕಾರಿ ಬಸವರಾಜ ಅಡವಿಮಠ ಮಾತನಾಡಿದರು. ತಾಪಂ ಇಒ ಎಸ್.ಎಸ್. ಕಾದ್ರೋಳ್ಳಿ ಇದ್ದರು.
Published on

ಚಿಕ್ಕೋಡಿ: ಚಿಕ್ಕೋಡಿ ತಾಲೂಕು ಮಟ್ಟದ ಎಲ್ಲ ಇಲಾಖೆಯ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಬೇಕು. ಕಲುಷಿತ ನೀರು, ಡೆಂೆ ಪ್ರವಾಹದ ಬಗ್ಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ತಾಲೂಕು ನೋಡಲ್ ಅಧಿಕಾರಿ ಬಸವರಾಜ ಅಡವಿಮಠ ಸೂಚಿಸಿದರು.

ತಾಪಂ ಸಭಾ ಭವನದಲ್ಲಿ ಗುರುವಾರ ಪ್ರಗತಿ ಪರಿಶೀಲನಾ ಸಭೆಯನ್ನುದ್ದೇಶಿಸಿ ಮಾತನಾಡಿ, ಕಲುಷಿತ ನೀರು ಸೇವಿಸಿ ಯಾವುದೇ ಕಾರಣಕ್ಕೂ ಜನರು ಅಸ್ವಸ್ಥಗೊಂಡರೆ ಸಂಬಂಧಿಸಿದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು. ಗ್ರಾಮಗಳಲ್ಲಿ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸಬೇಕು, ಜನರಿಗೆ ಡೆಂೆ ಬರದಂತೆ ಕ್ರಮ ಕೈಗೊಳ್ಳಬೇಕು. ಮಳೆ ಹೆಚ್ಚು ಆಗುವುದರಿಂದ ಪ್ರವಾಹ ಬರುವ ಸಂಭವವಿದೆ. ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ತಗೆದುಕೊಳ್ಳಬೇಕು ಎಂದರು.

ತಾಲೂಕಿನ ಎಲ್ಲ ನೋಡಲ್ ಅಧಿಕಾರಿಗಳು ತಮಗೆ ವಹಿಸಿದ ಗ್ರಾಪಂಗಳಲ್ಲಿ ಮೂಲಸೌಲಭ್ಯಗಳು, ಪ್ರವಾಹ ಪರಿಸ್ಥಿತಿ ತುರ್ತು ಕಾರ್ಯ ಕೈಗೊಳ್ಳಬೇಕು ಎಂದರು. ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಎಸ್.ಕಾದ್ರೋಳ್ಳಿ, ಸಹಾಯಕ ನಿರ್ದೇಶಕ ( ನರೇಗಾ/ ಪಂರಾ) ಶಿವಾನಂದ ಶಿರಗಾಂವಿ, ಎಸ್.ಎಸ್.ಮಠದ, ವ್ಯವಸ್ಥಾಪಕ ಉದಯಗೌಡ ಪಾಟೀಲ, ಸಹಾಯಕ ಲೆಕ್ಕಾಧಿಕಾರಿ ರಾಜೇಂದ್ರ ಮೈಗೂರ, ಸಿಡಿಪಿಒ ಭಾರತಿ ಕಾಂಬಳೆ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎ.ಮೇಕನಮರಡಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net