Flood ಸಂಭವಿಸದಂತೆ ಈಗಲೇ ಮುನ್ನೆಚ್ಚರಿಕೆ ವಹಿಸಿ-ಕೇಂದ್ರದ 2 ಇಲಾಖೆಗಳಿಗೆ ಡಿಸಿ ಸೂಚನೆ

Flood
Published on

ಕಾರವಾರ: ಮಳೆಗಾಲದ ಸಂದರ್ಭದಲ್ಲಿ ಕೃತಕ ನೆರೆ (Flood) ಉಂಟಾಗದಂತೆ ಈಗಲೇ ಅಗತ್ಯ ಮುನ್ನೆಚ್ಚರಿಕಾ ಕಾಮಗಾರಿಗಳನ್ನು ಕೈಗೊಳ್ಳಿ ಎಂದು ನೌಕಾನೆಲೆಯ ಅಧಿಕಾರಿಗಳು ಮತ್ತು ರಾಷ್ಟ್ರೀಯ  ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು.

ಅವರು ಗುರುವಾರ  ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅದ್ಯಕ್ಷತೆ ವಹಿಸಿ ಮಾತನಾಡಿದರು.

ನೌಕಾನೆಲೆ ಪ್ರದೇಶದಿಂದ ಕಾರವಾರದ ಚಂಡಿಯಾ, ಅರ್ಗಾ, ಸೇರಿದಂತೆ ಹಲವು ಪ್ರದೇಶಗಳಲ್ಲಿ ನೆರೆ Flood ಪರಿಸ್ಥಿತಿ ಉಂಟಾಗದಂತೆ ಈಗಿನಿಂದಲೇ ಅಗತ್ಯ ಕ್ರಮಗಳನ್ನು ಕೈಗೊಂಡು, ಮಳೆಗಾಲದಲ್ಲಿ ಈ ಭಾಗದ ಜನ ವಸತಿ ಪ್ರದೇಶಗಳಿಗೆ, ಸಾರ್ವಜನಿಕರಿಗೆ ಮತ್ತು ವಾಹನ ಸಂಚಾರಕ್ಕೆ ಯಾವುದೇ ಅಡಚಣೆಯಾಗದಂತೆ ಸರಾಗವಾಗಿ ನೀರು

ಹರಿಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.

ಪ್ರತೀ ವರ್ಷದ ಮಳೆಗಾಲದಲ್ಲಿ ನೌಕಾನಲೆ ಪ್ರದೇಶದಲ್ಲಿ ನೆರೆ Flood ಪರಿಸ್ಥಿತಿ ಉಂಟಾಗುತ್ತಿದ್ದು, ಈ ಸಮಸ್ಯೆಗೆ ಈಗಿನಿಂದಲೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ಅಗತ್ಯ ಡ್ರಜ್ಜಿಂಗ್, ಪೈಪ್ ಅಳವಡಿಕೆ ಸೇರಿದಂತೆ ಅತ್ಯಗತ್ಯವಾದ ಕ್ರಮಗಳನ್ನು ಕೈಗೊಳ್ಳುವಂತೆ

ತಿಳಿಸಿದ ಜಿಲ್ಲಾಧಿಕಾರಿಗಳು, ಈ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು, ಸಂಬಂಧಪಟ್ಟ ತಾ.ಪಂ. ಅಧಿಕಾರಿಗಳು ಜಂಟಿಯಾಗಿ ಸ್ಥಳ ಪರಿಶೀಲನೆ ನಡೆಸಿ ಕಾಮಗಾರಿಗಳನ್ನು ಕೈಗೊಳ್ಳುವಂತೆ ತಿಳಿಸಿದರು.

ನೌಕಾನಲೆಯ ಒಳಗೆ ನಡೆಯುತ್ತಿದ್ದ ಸೇತುವೆ ನಿರ್ಮಾಣ ಕಾಮಗಾರಿ ಮುಕ್ತಾಯಗೊಂಡಿದ್ದು, ಪ್ರಸ್ತುತ ರಾಷ್ಟ್ರೀಯ ಹೆದ್ದಾರಿ ಮೂಲಕ ನೌಕಾನೆಲೆ ಒಳಬರುವ ಮಳೆ ನೀರು ಯಾವುದೇ ಅಡೆ ತಡೆಗಳಿಲ್ಲದೇ ಸರಾಗವಾಗಿ ಹರಿದುಹೋಗುವಂತೆ ಮಾಡಲಾಗಿದೆ ಎಂದು ನೌಕಾನೆಲೆ ಅಧಿಕಾರಿಗಳು ಮಾಹಿತಿ ನೀಡಿದರು.

ಅಣೆಕಟ್ಟೆಗಳಿಂದ Flood ಆಗದಿರಲಿ

ಮಳೆಗಾಲದ ಸಂದರ್ಭದಲ್ಲಿಅಣೆಕಟ್ಟೆಗಳಿಂದ ನೀರು ಬಿಡುವುದರಿಂದ Flood  ಆಗದಂತೆ ಕ್ರಮ ವಹಿಸಬೇಖು,  ಜಿಲ್ಲೆಯ ಕದ್ರಾ ಮತ್ತು ಗೇರಸೊಪ್ಪ ಜಲಾಶಯಗಳಲ್ಲಿ ಮಳೆಗಾಲದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತಂತೆ ಎಸ್.ಓ.ಪಿ ರಚಿಸಿ ಅದರಂತೆ ಕಾರ್ಯನಿರ್ವಹಿಸುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಕೈಗಾ ಅಣುಸ್ಥಾವರ ಪ್ರದೇಶದಲ್ಲಿ ವಿಪತ್ತು ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಜಿಲ್ಲೆಯ ಆಪದಮಿತ್ರರಿಗೆ ತರಬೇತಿ ಆಯೋಜಿಸುವಂತೆ ತಿಳಿಸಿದರು.

ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬರಬಹುದಾದ ಸ್ಥಳಗಳ ಬಗ್ಗೆ ಸಾಕಷ್ಟು ಮುಂಚಿತವಾಗಿ ಗುರುತಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಕಾಡಿನಲ್ಲಿ ಬೀಳುವ ಬೆಂಕಿಯನ್ನು ನಿಯಂತ್ರಿಸುವ ಕುರಿತಂತೆ ಎಸ್.ಓ.ಪಿ. ರಚಿಸಿ, ಅಧಿಕಾರಿಗಳನ್ನು ಒಳಗೊಂಡ ಸಮಿತಿಯನ್ನು ರಚಿಸಿ ಕಾರ್ಯನಿರ್ವಹಿಸುವಂತೆ ತಿಳಿಸಿದರು.

ಸಭೆಯಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕಾಂದೂ, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಉಪ ಅರಣ್ಯ ಸಂರಕ್ಷಣಾಧಿಕಾರಿ ರವಿಶಂಕರ್, ಉಪ ವಿಭಾಗಾಧಿಕಾರಿಳಾದ ಕನಿಷ್ಕ, ಕಲ್ಯಾಣಿ ಕಾಂಬ್ಳೆ, ನೌಕಾನೆಲೆ ಮತ್ತು ಕೈಗಾ ಅಧಿಕಾರಿಗಳು

ಹಾಗೂ ಜಿಲ್ಲಾ ಮಟ್ಟದ ಇಲಾಖಾಧಿಕಾರಿಗಳು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net