ಗುರ್ಜಾಪುರ ಸ್ಥಳಾಂತರಕ್ಕೆ ಅಗತ್ಯ ಕ್ರಮ - ಸಂಸದ ರಾಜಾ ಅಮರೇಶ್ವರ ನಾಯಕ ಭರವಸೆ

Raichur MP Visit Gurjapura Village
ಪ್ರವಾಹ ಪೀಡಿತ ರಾಯಚೂರು ತಾಲೂಕಿನ ಗುರ್ಜಾಪುರ ಗ್ರಾಮಕ್ಕೆ ಸಂಸದ ರಾಜಾ ಅಮರೇಶ್ವರ ನಾಯಕ ಗುರುವಾರ ಭೇಟಿ ನೀಡಿ ಸ್ಥಳಾಂತರ ಕುರಿತು ಗ್ರಾಮಸ್ಥರೊಂದಿಗೆ ಚರ್ಚಿಸಿದರು.
Published on

ರಾಯಚೂರು: ತಾಲೂಕಿನ ಪ್ರವಾಹ ಪೀಡಿತ ಗುರ್ಜಾಪುರ ಗ್ರಾಮವನ್ನು ಸ್ಥಳಾಂತರಕ್ಕೆ ಕ್ರಮಕೈಗೊಳ್ಳಲಾಗಿದ್ದು, ಗ್ರಾಮಸ್ಥರ ಸಹಮತಿ ಮೇರೆಗೆ ಗುರುತಿಸಲಾಗಿರುವ ಸ್ಥಳದಲ್ಲಿ ಮನೆಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಸಂಸದ ರಾಜಾ ಅಮರೇಶ್ವರ ನಾಯಕ ಭರವಸೆ ನೀಡಿದರು.

ಅಧಿಕಾರಿಗಳೊಂದಿಗೆ ಗುರ್ಜಾಪುರ ಗ್ರಾಮಕ್ಕೆ ಗುರುವಾರ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಚರ್ಚಿಸಿದ ನಂತರ ಮಾತನಾಡಿದರು. ಮನೆಗಳ ನಿರ್ಮಾಣದ ಹೊಣೆಯನ್ನು ರಾಜೀವಗಾಂಧಿ ವಸತಿ ನಿಗಮಕ್ಕೆ ವಹಿಸಲಾಗುತ್ತಿದ್ದು, ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸುವುದು. ಕೃಷ್ಣಾ ನದಿಗೆ ಹೆಚ್ಚಿನ ನೀರು ಹರಿದು ಬಂದಾಗ ಗ್ರಾಮ ಪ್ರವಾಹ ಭೀತಿ ಎದುರಿಸುತ್ತದೆ. ಜಿಲ್ಲಾಡಳಿತ ಗ್ರಾಮವನ್ನು ಸ್ಥಳಾಂತರಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುತ್ತಿದೆ. ಗ್ರಾಮಸ್ಥರು ಸಹಕರಿಸಬೇಕು ಎಂದರು.

ಈ ಹಿಂದೆ ಗ್ರಾಮವನ್ನು ಸ್ಥಳಾಂತರಕ್ಕೆ ಗುರುತಿಸಲಾದ ಸ್ಥಳ ಸೂಕ್ತವಾಗಿಲ್ಲ. ಯಾವುದೇ ಮೂಲ ಸೌಕರ್ಯಗಳಿಲ್ಲದ ಜಾಗಕ್ಕೆ ಸ್ಥಳಾಂತರಗೊಳ್ಳಲು ನಾವು ಸಿದ್ಧರಿಲ್ಲ ಎಂದು ತಿಳಿಸಿದ ಗ್ರಾಮಸ್ಥರು, ಈಗ ಗುರುತಿಸಲಾದ ಸ್ಥಳದಲ್ಲಿ ರಸ್ತೆ, ಕುಡಿಯುವ ನೀರು, ವಿದ್ಯುತ್ ಮುಂತಾದ ಸೌಕರ್ಯಗಳನ್ನು ಕಲ್ಪಿಸಿದಲ್ಲಿ ಮಾತ್ರ ಸ್ಥಳಾಂತರಕ್ಕೆ ಸಿದ್ಧ. ಗ್ರಾಮಸ್ಥರ ಸಹಮತಿಯಂತೆ ಗುರುತಿಸಿದ ಸ್ಥಳದಲ್ಲಿ ಮನೆಗಳನ್ನು ನಿರ್ಮಾಣ ಮಾಡಲಾಗುವುದು. ಎಲ್ಲ ಅಗತ್ಯ ಸೌಕರ್ಯಗಳನ್ನು ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net