ಅತಿವೃಷ್ಟಿ ಸಮಸ್ಯೆಗೆ ಸ್ಪಂದಿಸದ ಸರ್ಕಾರ: ಹಗರಿಬೊಮ್ಮನಹಳ್ಳಿಯಲ್ಲಿ ರೈತ ಸಂಘದ ಮುಖಂಡರ ಪ್ರತಿಭಟನೆ

HBHalli Farmers Union Protest
ಹಬೊಹಳ್ಳಿಯಲ್ಲಿ ಉಪ ತಹಸೀಲ್ದಾರ್ ಮಂಜುನಾಥಗೆ ತಾಲೂಕು ರೈತ ಸಂಘ ಮತ್ತು ಹಸಿರು ಸೇನೆ ಶುಕ್ರವಾರ ಮನವಿ ಸಲ್ಲಿಸಿತು.
Published on

ಹಗರಿಬೊಮ್ಮನಹಳ್ಳಿ: ಅತಿವೃಷ್ಟಿ ಸಮಸ್ಯೆಗೆ ಸ್ಪಂದಿಸದೆ ನಿರ್ಲಕ್ಷ್ಯ ವಹಿಸಿರುವ ಸರ್ಕಾರದ ವಿರುದ್ಧ ತಾಲೂಕು ರೈತ ಸಂಘ ಮತ್ತು ಹಸಿರು ಸೇನೆ ಮುಖಂಡರು ಶುಕ್ರವಾರ ತಹಸಿಲ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ರೈತ ಸಂಘದ ಕಾರ್ಯಾಧ್ಯಕ್ಷ ಜೆ.ಎಂ.ವೀರಸಂಗಯ್ಯ ಮಾತನಾಡಿ, ಉತ್ತರ ಕರ್ನಾಟಕದ ರೈತರು ಕಳೆದ ವರ್ಷ ಅನುಭವಿಸಿದ ಪ್ರವಾಹದ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಿಲ್ಲ. ಕೇಂದ್ರ ಸರ್ಕಾರ ಈ ಬಗ್ಗೆ ಗಮನಹರಿಸುತ್ತಿಲ್ಲ. ರಾಜ್ಯ ಸರ್ಕಾರ ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ಒತ್ತಾಯಿಸಬೇಕು. ಪ್ರವಾಹ ಪೀಡಿತ ಜನರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು ರೈತ ಮುಖಂಡರ ಸಭೆ ಕರೆಯಬೇಕು. ಬೆಳೆ ವಿಮಾ ಪರಿಹಾರ, ಕಬ್ಬಿನ ಬಾಕಿ ಹಣ ರೈತರ ಖಾತೆಗೆ ಜಮಾ ಮಾಡಬೇಕು. ಪ್ರವಾಹ ಪೀಡಿತ ಪ್ರದೇಶದ ರೈತರ ಸಾಲಮನ್ನಾ ಮಾಡಬೇಕು ಎಂದು ಆಗ್ರಹಿಸಿದರು. ಬಳಿಕ ಉಪತಹಸೀಲ್ದಾರ್ ಮಂಜುನಾಥಗೆ ಮನವಿ ಸಲ್ಲಿಸಿದರು.

ಮುಖಂಡರಾದ ಜಿ.ಲಕ್ಷ್ಮೀಪತಿ, ಸಿ.ನೀಲಕಂಠಪ್ಪ, ಕೆ.ಪಿ.ದೇವರಾಜ, ಒಪ್ಪತೇಶ್ವರ ಬಣಕಾರ್, ಏಣಿಗಿ ಮಾಬುಸಾಬ್, ಯು.ಮಹೇಶ್ವರಪ್ಪ, ಎಂ.ಜಿ.ಮೃತ್ಯುಂಜಯ, ಆಲಂಬಾಷಾ, ರಾಜು ನವೀನ್, ಬಿ.ಎಂ.ಚಕ್ರಯ್ಯ, ಬಿ.ಎಂ.ಮರುಳಸಿದ್ದಯ್ಯ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net