ಪ್ರವಾಹ ಸಂತ್ರಸ್ತರಿಗೆ ಪರಿಹಾರ ಒದಗಿಸುವ ಕ್ರಮವಾಗಲಿ

4
ಅಥಣಿ ತಾಪಂ ಸಭಾಂಗಣದಲ್ಲಿ ತಾಲೂಕುಮಟ್ಟದ ಅಧಿಕಾರಿಗಳ ಸಭೆ ಉದ್ದೇಶಿಸಿ ಶಾಸಕ ಲಕ್ಷ್ಮಣ ಸವದಿ ಮಾತನಾಡಿದರು. ತಹಸೀಲ್ದಾರ್ ವಾಣಿ ಯು., ತಾಪಂ ಇಒ ಶಿವಾನಂದ ಕಲ್ಲಾಪುರ ಇದ್ದರು.
Published on

ಅಥಣಿ: ಪ್ರವಾಹ ಸಂತ್ರಸ್ತರಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಲಕ್ಷ್ಮಣ ಸವದಿ
ಅಧಿಕಾರಿಗಳಿಗೆ ಸೂಚಿಸಿದರು.

ಇಲ್ಲಿನ ತಾಪಂ ಸಭಾಭವನದಲ್ಲಿ ಪ್ರವಾಹ ನಿರ್ವಹಣೆ ಕುರಿತು ಬುಧವಾರ ಹಮ್ಮಿಕೊಂಡಿದ್ದ ತಾಲೂಕುಮಟ್ಟದ ಅಧಿಕಾರಿಗಳ ತುರ್ತು ಸಭೆ ಉದ್ದೇಶಿಸಿ ಮಾತನಾಡಿದರು.

ಕಾಳಜಿ ಕೇಂದ್ರಗಳಲ್ಲಿ ನೆಲೆಸಿರುವ ಸಂತ್ರಸ್ತರಿಗೆ ಆಹಾರ ವ್ಯವಸ್ಥೆ ಹಾಗೂ ಜಾನುವಾರುಗಳಿಗೆ ಮೇವಿನ ವ್ಯವಸ್ಥೆ ತಕ್ಷಣ ಮಾಡಬೇಕು. ಹವಾಮಾನ ಇಲಾಖೆಯ ಪ್ರಕಾರ ಮಳೆ ಪ್ರಮಾಣ ಹೆಚ್ಚಾಗಲಿದೆ. ಆದ್ದರಿಂದ ಪ್ರವಾಹ ನಿರ್ವಹಣೆಗೆ ಬೇಕಾಗುವ ಎಲ್ಲ ವ್ಯವಸ್ಥೆ ಕೈಗೊಳ್ಳಬೇಕು ಎಂದರು.

ತಹಸೀಲ್ದಾರ್ ವಾಣಿ ಯು., ತಾಪಂ ಇಒ ಶಿವಾನಂದ ಕಲ್ಲಾಪುರ, ಅಧಿಕಾರಿಗಳಾದ ವಿ.ಎ.ವಾಲಿ,
ಶಿವಾನಂದ ಕಾರಜೋಳ, ಅಶೋಕ ಗುಡಿಮನಿ, ನಿಂಗಣ್ಣ ಬಿರಾದಾರ, ಎಂ.ಎಸ್.ಮಗದುಮ್ಮ, ರವಿ ಮುಗರಾಲಿ, ಪ್ರವೀಣ ಹುನಸಿಕಟ್ಟಿ, ಪ್ರಶಾಂತ ಗಾಣಿಗೇರ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net