

ವಿಜಯವಾಣಿ ಸುದ್ದಿಜಾಲ ಯಾದಗಿರಿ
ಕೃಷ್ಣಾ ಹಾಗೂ ಭೀಮಾ ನದಿ ತೀರದ ವ್ಯಾಪ್ತಿಯಲ್ಲಿ ಪ್ರವಾಹ ಪರಿಸ್ಥಿತಿ ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಹರ್ಷಲï ಭೋಯರ್ ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಕರೆದಿದ್ದ ಕೆಸ್ವಾನ್ ಮೂಲಕ ಇಂದು ವಿವಿಧ ಇಲಾಖೆಗಳ ( ವಿಡಿಯೋ ಮೂಲಕ )ಅಧಿಕಾರಿಗಳೊಂದಿಗೆ ಜಿ¯್ಲÁ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ ನಡೆಸಿದ ಅವರು, ಈ ನದಿಗಳ ಪಾತ್ರದ ಜನರಲ್ಲಿ ಪ್ರವಾಹದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಬಗ್ಗೆ ಸೂಕ್ತ ಜಾಗೃತಿ ಮೂಡಿಸಬೇಕು ಎಂದು ಸಂಬAಧಿಸಿದ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಜಿ¯್ಲÁಧಿಕಾರಿಗಳ ಕಾರ್ಯಾಲಯ ಹಾಗೂ ತಾಲೂಕು ವ್ಯಾಪ್ತಿಯಲ್ಲಿ ಸಹಾಯವಾಣಿ ಸ್ಥಾಪಿಸಲಾಗಿದ್ದು, ನದಿ ಪಾತ್ರದ ಹಾಗೂ ಜಿ¯್ಲೆಯ ನಾಗರಿಕರಿಗೆ ಸಮಸ್ಯೆ ಬಂದಲ್ಲಿ ಸಂಪರ್ಕಿಸುವAತೆ ಅವರು ಸೂಚಿಸಿದರು. ಜಿ¯್ಲÉಯಲ್ಲಿ ಜಾನುವಾರುಗಳಿಗೆ ತೊಂದರೆಯಾಗದAತೆ ನಿಗಾವಹಿಸಬೇಕು. ಪ್ರವಾಹ ಪರಿಸ್ಥಿತಿ ನಿಭಾಯಿಸಲು ಸಕಲ ಕ್ರಮ ಕೈಗೊಳ್ಳುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿ ಯಾವುದೇ ಸಂದರ್ಭದಲ್ಲಿ ಅನುಮತಿ ಇಲ್ಲದೆ ಕೇಂದ್ರ ಸ್ಥಾನ ಬಿಡದಿರಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಕೃಷ್ಣಾ ಮತ್ತು ಭೀಮಾ ನದಿ ಪಾತ್ರದಲ್ಲಿ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳಲು ನೇಮಕ ಮಾಡಲಾದ ನೋಡಲï ಅಧಿಕಾರಿಗಳು ಕಡ್ಡಾಯವಾಗಿ ನಿಮಗೆ ವಹಿಸಲಾದ ಗ್ರಾಮಗಳಿಗೆ ಭೇಟಿ ನೀಡಿ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು. ಭಾರಿ ಮಳೆಯಿಂದ ಹಾನಿಯಾದ ಜಮೀನುಗಳಿಗೆ ಭೇಟಿ ನೀಡಿ ಜಂಟಿ ಸಮೀಕ್ಷೆ ವರದಿ ಸಲ್ಲಿಸಲು ಕೃಷಿ, ತೋಟಗಾರಿಕೆ, ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಜಿ¯್ಲÉಯಲ್ಲಿ ಸುರಿದ ಮಳೆಯಿಂದ ಹಾನಿಯಾಗಿರುವ ಮನೆಗಳ ಜಂಟಿ ಸಮೀಕ್ಷೆ ಕೈಗೊಂಡು ವರದಿ ಸಲ್ಲಿಸುವಂತೆ, ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಪ್ರವಾಹ ಪರಿಸ್ಥಿತಿಯಲ್ಲಿ ಅಗತ್ಯ ಮುಂಜಾಗ್ರತೆ ಕ್ರಮವಹಿಸಲು ಅಗ್ನಿಶಾಮಕ ಇಲಾಖೆ ಅಧಿಕಾರಿ, ಸಿಬ್ಬಂದಿಸನ್ನದ್ದರಿದ್ದು, ಅವಶ್ಯವಿದ್ದಲ್ಲಿ ಅವರ ಸಹಾಯ ಪಡೆಯಲು ಸೂಚಿಸಿದರು.
ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಜಿ¯್ಲÁಡಳಿತ ಸಂಪೂರ್ಣ ಸನ್ನದ್ದವಾಗಿದ್ದು, ಜನ ಜಾನುವಾರುಗಳಿಗೆ ಯಾವುದೇ ರೀತಿ ತೊಂದರೆಯಾಗದAತೆ ಸೂಕ್ತ ರP್ಷÀಣೆ ನೀಡಲಾಗುವುದು ಎಂದು ತಿಳಿಸಿದರು.ಜಿ¯್ಲÁಮಟ್ಟದ ಹಾಗೂ ತಾಲ್ಲೂಕು ಮಟ್ಟದ ಎಲ್ಲ ಅಧಿಕಾರಿಗಳು ರಜೆ ಮೇಲೆ ತೆರಳದಂತೆ ಹಾಗೂ ಕೇಂದ್ರಸ್ಥಾನ ಬಿಟ್ಟು ಹೋಗದಂತೆ ಡಿಸಿ ಸೂಚಿಸಿದರು.