ನಾಪೋಕ್ಲು ವ್ಯಾಪ್ತಿಯಲ್ಲಿ ಪ್ರವಾಹ

17.npk ..1
ನಾಪೋಕ್ಲು -ಮೂರ್ನಾಡು ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯ ಹೊದ್ದೂರು ಗ್ರಾಮದ ಎಂಬಲ್ಲಿ ಬೊಳಿಬಾಣೆಯಲ್ಲಿ ರಸ್ತೆಯ ಮೇಲೆ ನಾಲ್ಕು ಅಡಿಗಳಷ್ಟು ಪ್ರವಾಹ ಹರಿಯುತ್ತಿದ್ದು ವಾಹನ ಸಂಚಾರ ಸ್ಥಗಿತಗೊಂಡಿದೆ.
Published on

ನಾಪೋಕ್ಲು: ನಾಪೋಕ್ಲು ವ್ಯಾಪ್ತಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಸಮೀಪದ ಕೊಟ್ಟಮುಡಿ, ಹೊದ್ದುರು, ಬಲಮುರಿಗಳಲ್ಲಿ ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ.

ನಾಪೋಕ್ಲು-ಮೂರ್ನಾಡು ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯ ಹೊದ್ದೂರು ಗ್ರಾಮದ ಎಂಬಲ್ಲಿ ಬೊಳಿಬಾಣೆಯಲ್ಲಿ ರಸ್ತೆಯ ಮೇಲೆ ನಾಲ್ಕು ಅಡಿಗಳಷ್ಟು ಪ್ರವಾಹ ಹರಿಯುತ್ತಿದ್ದು ವಾಹನ ಸಂಚಾರ ಸ್ಥಗಿತಗೊಂಡಿದೆ. ಚೆರಿಯಪರಂಬು ಕಲ್ಲುಮೊಟ್ಟೆ ಸಂಪರ್ಕ ರಸ್ತೆ, ನಾಪೋಕ್ಲು -ಬಲಮುರಿ ಮಾರ್ಗದ ಮಕ್ಕಿಕಡವು ರಸ್ತೆ ಜಲಾವೃತಗೊಂಡು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.

ಮೂರ್ನಾಡು ರಸ್ತೆ ಸಂಪರ್ಕ ಕಡಿತಗೊಂಡಿರುವುದರಿಂದ ವಾಹನ ಸಂಚಾರಕ್ಕೆ ತೊಡಕಾಗಿ ನಾಪೋಕ್ಲು ಕೊಟ್ಟಮುಡಿ, ಕೇಮಾಟ್, ಕುಯ್ಯಂಗೇರಿ ಹೊದ್ದೂರು ಮಾರ್ಗವಾಗಿ ಮೂರ್ನಾಡಿಗೆ ವಾಹನಗಳು ಸಂಚರಿಸುತ್ತಿವೆ. ಅಪಾಯ ಮಟ್ಟ ಮೀರಿ ಪ್ರವಾಹ ಹರಿಯುತ್ತಿರುವ ರಸ್ತೆಗಳಲ್ಲಿ ಪೊಲೀಸರು ಬ್ಯಾರಿಗೇಡ್ ಅಳವಡಿಸಿ ಮೊನ್ನೆಚ್ಚರಿಕೆ ಕ್ರಮವನ್ನು ಕೈಗೊಳ್ಳಲಾಗಿದೆ.

ಮಳೆ ಮುಂದುವರಿದರೆ ನಾಪೋಕ್ಲು-ಕೊಟ್ಟಮುಡಿ ಸಂಪರ್ಕ ರಸ್ತೆ ಸೇರಿದಂತೆ ನಾಪೋಕ್ಲು ವ್ಯಾಪ್ತಿಯ ಪ್ರಮುಖ ರಸ್ತೆಗಳ ಸಂಚಾರ ಕಡಿತಗೊಳ್ಳುವ ಸಾಧ್ಯತೆ ಇದೆ. ನಾಪೋಕ್ಲುವಿನಲ್ಲಿ ಧಾರಾಕಾರ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net