ಅಂಬೇಡ್ಕರ್ ಪುತ್ಥಳಿಗೆ ಜಿಲ್ಲಾಡಳಿತದಿಂದ ಪುಷ್ಪ ನಮನ

06-12-Shiva-2a
ಅಂಬೇಡ್ಕರ್‌ರ ಮಹಾ ಪರಿನಿರ್ವಾಣ ದಿನಾಚರಣೆ ನಿಮಿತ್ತ ರಾಯಚೂರಿನಲ್ಲಿ ಅಂಬೇಡ್ಕರ್ ಪುತ್ಥಳಿಗೆ ಜಿಲ್ಲಾಕಾರಿ ಚಂದ್ರಶೇಖರ ನಾಯಕ, ಜಿ.ಪಂ. ಸಿಇಒ ರಾಹುಲ್ ತುಕಾರಾಮ್ ಪಾಂಡ್ವೆ, ಎಸ್ಪಿ ಬಿ.ನಿಖಿಲ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಜಿ.ಜಗದೀಶ ಬುಧವಾರ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.
Published on

ರಾಯಚೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ರ ಮಹಾ ಪರಿನಿರ್ವಾಣ ದಿನಾಚರಣೆ ನಿಮಿತ್ತ ನಗರದಲ್ಲಿನ ಅಂಬೇಡ್ಕರ್ ಪುತ್ಥಳಿಗೆ ಬುಧವಾರ ಜಿಲ್ಲಾಡಳಿತದಿಂದ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿ, ಅಂಬೇಡ್ಕರರ ವಿಚಾರಧಾರೆ, ಚಿಂತನೆಗಳನ್ನು ಸ್ಮರಿಸಲಾಯಿತು.
ಜಿಲ್ಲಾಕಾರಿ ಚಂದ್ರಶೇಖರ ನಾಯಕ, ಜಿ.ಪಂ. ಸಿಇಒ ರಾಹುಲ್ ತುಕಾರಾಮ್ ಪಾಂಡ್ವೆ, ಎಸ್ಪಿ ಬಿ.ನಿಖಿಲ್ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಅಂಬೇಡ್ಕರರ ಸಾಧನೆ ಮತ್ತು ಹೋರಾಟದ ಜೀವನವನ್ನು ನೆನಪಿಸಿಕೊಂಡರು.
ಈ ಸಂದರ್ಭದಲ್ಲಿ ಸಹಾಯಕ ಆಯುಕ್ತೆ ಮಹೆಬೂಬಿ, ತಹಸೀಲ್ದಾರ್ ಸುರೇಶ ವರ್ಮಾ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಜಿ.ಜಗದೀಶ, ನಗರಾಭಿವೃದ್ಧಿ ಪ್ರಾಕಾರದ ಆಯುಕ್ತ ಮಹಿಬೂಬ್ ಜಿಲಾನಿ, ನಗರಸಭೆ ಪೌರಾಯುಕ್ತ ಗುರುಸಿದ್ಧಯ್ಯ ಹಿರೇಮಠ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಚೇತನಕುಮಾರ, ಡಿಡಿಪಿಐ ಕೆ.ಡಿ.ಬಡಿಗೇರ ಹಾಗೂ ದಲಿತ ಸಂಘಟನೆಗಳು ಮುಖಂಡರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net