ವಿಜೃಂಭಣೆಯಿಂದ ಹೂಗಾರ ಮಾದಯ್ಯ ಜಯಂತಿ

IMG_20231020_111241
Published on

ರಾಯಚೂರು: ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ನ.5ರಂದು ಬೆಳಗ್ಗೆ 11ಕ್ಕೆ ಶರಣ ಹೂಗಾರ ಮಾದಯ್ಯ ಜಯಂತಿ ಹಾಗೂ ಹೂಗಾರ ಸಮಾಜದ ವಿದ್ಯಾರ್ಥಿಗಳಿಗಾಗಿ ಪ್ರತಿಭಾ ಪುರಸ್ಕಾರ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಹೂಗಾರ ಸಮಾಜ ಸಂಘದ ಅಧ್ಯಕ್ಷ ಈರಣ್ಣ ಹೂಗಾರ ತಿಳಿಸಿದರು.
ಸ್ಥಳೀಯ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿ, ಪ್ರತಿವರ್ಷ ತಾಲೂಕು ಸಮಿತಿಗಳಿಂದ ಸರಳ ರೀತಿಯಲ್ಲಿ ಜಯಂತಿ ಆಚರಿಸಲಾಗುತ್ತಿತ್ತು. ಈ ಬಾರಿ ಜಿಲ್ಲಾ ಸಮಿತಿಯಿಂದ ವಿಜೃಂಭಣೆಯಿಂದ ಜಯಂತಿ ನಡೆಸಲು ನಿರ್ಧರಿಸಲಾಗಿದೆ ಎಂದರು.
ಜಯಂತಿಯಲ್ಲಿ ಜಿಲ್ಲೆಯ ಸಚಿವರು, ಶಾಸಕರು ಹಾಗೂ ಸಮಾಜದ ಮುಖಂಡರು ಪಾಲ್ಗೊಳ್ಳಲಿದ್ದು, ಹೂಗಾರ ಮಾದಯ್ಯ ಭಾವಚಿತ್ರ ಮೆರವಣಿಗೆ ಹಾಗೂ ಸಮಾಜದ ಸಂಘಟನೆಯಲ್ಲಿ ತೊಡಗಿರುವವರನ್ನು ಸನ್ಮಾನಿಸಿ, ಗೌರವಿಸಲು ತೀರ್ಮಾಣಿಸಲಾಗಿದೆ.
ಎಸ್ಸೆಸ್ಸೆಲ್ಸಿ, ಪಿಯು ದ್ವಿತೀಯ ಪರೀಕ್ಷೆಯಲ್ಲಿ ಶೇ.70ಕ್ಕಿಂತ ಹೆಚ್ಚಿನ ಅಂಕ ಪಡೆದು ತೇರ್ಗಡೆಯಾದ ವಿದ್ಯಾರ್ಥಿಗಳನ್ನು ಪ್ರತಿಭಾ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗುತ್ತಿದ್ದು, ಆಯ್ಕೆಯಾದ ವಿದ್ಯಾರ್ಥಿಗಳಿಗೆ ತಲಾ ಒಂದು ಸಾವಿರ ರೂ. ನಗದು ಹಾಗೂ ಪ್ರಮಾಣಪತ್ರ ನೀಡಲಾಗುವುದು.
ಈಗಾಗಲೇ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದು, ಆಸಕ್ತ ವಿದ್ಯಾರ್ಥಿಗಳು ಸಂಘದ ತಾಲೂಕು ಅಧ್ಯಕ್ಷರಲ್ಲಿ ಇಲ್ಲವೇ ರಾಯಚೂರು ತಾಲೂಕು ಅಧ್ಯಕ್ಷ ಶಶಿಧರ ಹೂಗಾರ (ಮೊ:9900416290) ಸಂಪರ್ಕಿಸಿ ಅ.30ರೊಳಗೆ ಹೆಸರು ನೋಂದಾಯಿಸಿಕೊಳ್ಳುವಂತೆ ಈರಣ್ಣ ಹೂಗಾರ ತಿಳಿಸಿದರು.
ಈ ಸಂದರ್ಭದಲ್ಲಿ ಸಂಘದ ಪದಾಕಾರಿಗಳಾದ ಎಚ್.ನರಸಣ್ಣ, ಶಶಿಧರ ಹೂಗಾರ, ಮಲ್ಲಿಕಾರ್ಜುನ ಹೂಗಾರ, ಮಲ್ಲಿಕಾರ್ಜುನ ಹೂಗಾರ, ನರಸಣ್ಣ ಹೂಗಾರ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net