ಶಿಕ್ಷಕರು ಮಕ್ಕಳ ಪ್ರತಿಭೆ ಗುರುತಿಸಲಿ

Untitled design(2)
ಹೊಳಲು ಗ್ರಾಮದಲ್ಲಿ ಏರ್ಪಡಿಸಿದ್ದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಿವಿಧ ವೇಷಭೂಷಣದಲ್ಲಿ ವಿದ್ಯಾರ್ಥಿಗಳು.
Published on

ಹೂವಿನಹಡಗಲಿ: ವಿದ್ಯಾರ್ಥಿಗಳಲ್ಲಿನ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳು ಉಪಯುಕ್ತವಾಗಿವೆ ಎಂದು ಸಿಆರ್‌ಪಿ ಬಾಷಾ ಹೇಳಿದರು. ಹೊಳಲು ಗ್ರಾಮದಲ್ಲಿ ಬುಧವಾರ ಏರ್ಪಡಿಸಿದ್ದ ಹೊಳಲು ಕ್ಲಸ್ಟರ್‌ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಗ್ರಾಮೀಣ ಭಾಗದ ಮಕ್ಕಳಲ್ಲಿ ಅನೇಕ ಪ್ರತಿಭೆಗಳು ಅಡಗಿರುತ್ತವೆ. ಅವುಗಳನ್ನು ಶಿಕ್ಷಕರು ಗುರುತಿಸಬೇಕು. ಶೈಕ್ಷಣಿಕ ಚಟುವಟಿಕೆ ಜತೆಗೆ ಸಮಾಜಮುಖಿ ಚಿಂತನೆಯನ್ನು ಬೆಳೆಸುವ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದರು.

ನಿವೃತ್ತ ಶಿಕ್ಷಕ ರಾಜೇಂದ್ರಗೌಡ ಮಾತನಾಡಿ, ಮಕ್ಕಳಿಗೆ ಶಾಲೆಯಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವುದರ ಜತೆಗೆ ಪ್ರತಿಭೆ ಗುರುತಿಸಬೇಕು. ವಿದ್ಯಾರ್ಥಿಗಳ ಕಲಿಕೆಗೆ ಹಾಗೂ ಹೊಸದಾದ ಕೌಶಲ ಹೊಂದಲು ಪ್ರತಿಭಾ ಕಾರಂಜಿ ಸೂಕ್ತ ವೆದಿಕೆಯಾಗಿದೆ ಎಂದರು. ಗ್ರಾಪಂ ಅಧ್ಯಕ್ಷ ಮಂಜುನಾಥ ಹಲಗೇರಿ, ಪಿಡಿಒ ಅನ್ನದಾನ ನಾಯ್ಕ, ಶಾಲಾ ಮುಖ್ಯಶಿಕ್ಷಕ ರವಿಕುಮಾರ, ಸಹ ಶಿಕ್ಷಕ ಮಹೇಶ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net