ಒಳಮೀಸಲಾತಿ ವಿರೋಧಿಸಿ ಹೋರಾಟ

28-march-hdl-01
Published on

ಹೂವಿನಹಡಗಲಿ: ರಾಜ್ಯ ಸರ್ಕಾರದ ಒಳಮೀಸಲಾತಿ ಜಾರಿ ಮಾಡುವ ನಿರ್ಧಾರ ಖಂಡಿಸಿ ತಾಲೂಕಿನ ದಾಸರಹಳ್ಳಿತಾಂಡಾದ ಯುವಕ ಸೇವಾನಾಯ್ಕ ಒಂಟಿಯಾಗಿ ಮಂಗಳವಾರ ಪ್ರತಿಭಟನೆ ನಡೆಸಿದ್ದಾನೆ.

ಒಳಮೀಸಲಾತಿ ಜಾರಿಯಿಂದ ಬಂಜಾರ ಸೇರಿ ವಿವಿಧ ಸಮುದಾಯಗಳಿಗೆ ಅನ್ಯಾಯವಾಗಿದೆ. ಸಮಾಜದ ಮುಖ್ಯವಾಹಿನಿಗೆ ಬರಬೇಕಾದ ಸಮುದಾಯಗಳು ಮತ್ತೆ ಹಿಂದುಳಿಯಲಿವೆ. ಕೂಡಲೇ ಸರ್ಕಾರ ಈ ನಿರ್ಧಾರವನ್ನು ಕೈಬಿಡಬೇಕು. ಇಲ್ಲದಿದ್ದರೆ ಮುಂಬರುವ ವಿಧಾನಸಭಾ ಚುನಾವಣೆ ವೇಳೆ ಮತದಾನ ಬಹಿಷ್ಕರಿಸುವುದಾಗಿ ತಿಳಿಸಿದ್ದಾನೆ.

ಸೇವಾನಾಯ್ಕ ಪಟ್ಟಣದ ಶಾಸ್ತ್ರಿ ವೃತ್ತದಲ್ಲಿ ಬೆಳಗ್ಗೆಯಿಂದಲೇ ಪ್ರತಿಭಟನೆ ಆರಂಭಿಸಿದ ವಿಷಯ ಸಂಜೆಯ ವೇಳೆ ತಿಳಿದಿದ್ದರಿಂದ, ನಂತರ ಸ್ಥಳಕ್ಕೆ ಆಗಮಿಸಿದ ಪೊಲೀಸರು ಆತನ ಮನವೊಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net