ಹುಬ್ಬಳ್ಳಿಯಲ್ಲಿ ಫಲಪುಷ್ಪ ಪ್ರದರ್ಶನ

Folwer new
Published on

ಹುಬ್ಬಳ್ಳಿ : ಧಾರವಾಡ ಜಿಲ್ಲಾ ಮಟ್ಟದ ಫಲಪುಷ್ಪ ಪ್ರದರ್ಶನ ಹಾಗೂ ಸಿರಿಧಾನ್ಯ ಹಬ್ಬ 2023-24 ಅನ್ನು ಜ. 26 ರಿಂದ 28 ರವರೆಗೆ ಹುಬ್ಬಳ್ಳಿಯ ಇಂದಿರಾ ಗಾಜಿನ ಮನೆಯಲ್ಲಿ ಆಯೋಜಿಸಲಾಗಿದೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ, ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆ, ಮೀನುಗಾರಿಕೆ ಇಲಾಖೆ, ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್, ಹಾಪ್ ಕಾಮ್್ಸ ಮತ್ತು ಉದ್ಯಾನ ಹಾಗೂ ಫಲಪುಷ್ಪ ಪ್ರದರ್ಶನ ಸಮಿತಿ ಇವುಗಳ ಸಂಯುಕ್ತಾಶ್ರಯದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ.

26ರಂದು ಮಧ್ಯಾಹ್ನ 4 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಲಾಡ್ ಉದ್ಘಾಟಿಸುವರು.

ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಭಾಪತಿ ಬಸವರಾಜ ಹೊರಟ್ಟಿ, ಕೃಷಿ ಸಚಿವ ಎನ್. ಚಲುವರಾಯಸ್ವಾಮಿ, ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಮತ್ತು ವಿಧಾನ ಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್ ಅತಿಥಿಗಳಾಗಿ ಪಾಲ್ಗೊಳ್ಳುವರು.

ಶಾಸಕ ಮಹೇಶ ಟೆಂಗಿನಕಾಯಿ ಅಧ್ಯಕ್ಷತೆ ವಹಿಸುವರು. ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸುವರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net