ಮೂರು ತಿಂಗಳಿಂದ ನೀರಿನ ಸಮಸ್ಯೆ

Untitled design (10)
ಹೂವಿನಹಡಗಲಿಯ ಪುರಸಭೆ ಮುಂಭಾಗ ಮಹಿಳೆಯರು ಗುರುವಾರ ಪ್ರತಿಭಟನೆ ನಡೆಸಿದರು. ಪ್ರಮುಖರಾದ ಎಚ್.ಸುನೀತಮ್ಮ, ಅಕ್ಕಮ್ಮ, ಚಂದ್ರಮ್ಮ, ಲಲಿತಮ್ಮ ಇತರರಿದ್ದರು.
Published on

ಹೂವಿನಹಡಗಲಿ: ಸಮರ್ಪಕವಾಗಿ ನೀರು ಪೂರೈಕೆ ಮಾಡಲು ಆಗ್ರಹಿಸಿ ಮಹಿಳೆಯರು ಪಟ್ಟಣದ ಪುರಸಭೆ ಮುಂಭಾಗ ಗುರುವಾರ ಪ್ರತಿಭಟನೆ ನಡೆಸಿದರು.
ಪಟ್ಟಣದ 17ನೇ ವಾರ್ಡ್ ಸಂತೆ ಬಜಾರದ ಹಿಂಭಾಗ ಪ್ರದೇಶದ ಮನೆಗಳಿಗೆ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ. ಹೀಗಾಗಿ ನಿವಾಸಿಗಳಿಗೆ ಸಮಸ್ಯೆಯಾಗುತ್ತಿದೆ. ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಭೂಮಿ ಅಗೇದಿದ್ದರಿಂದ ಸಮಸ್ಯೆ

ಪಟ್ಟಣದಲ್ಲಿ ಒಎಫ್‌ಸಿ ಕೇಬಲ್ ಅಳವಡಿಕೆಯ ಸಂದರ್ಭದಲ್ಲಿ ಬಹುತೇಕ ಭಾಗಗಳಲ್ಲಿ ಭೂಮಿಯನ್ನು ಅಗೆದು ನೀರಿನ ಪೈಪ್ ಲೈನ್ ಸಂಪರ್ಕ ಕಡಿತಗೊಳಿಸಲಾಗಿದೆ. ಹೀಗಾಗಿ ಮೂರು ತಿಂಗಳಿಂದ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಕುಡಿಯುವ ನೀರು ಪೂರೈಸುವಂತೆ ಅನೇಕ ಬಾರಿ ಪುರಸಭೆ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜವಾಗಿಲ್ಲ.

ಅಧಿಕಾರಿಗಳು ಸ್ಪಂದಿಸದೇ ಹಾರಿಕೆ ಉತ್ತರ ನೀಡುತ್ತಿದ್ದಾರೆ. ಕೂಡಲೇ ಪೈಪ್ ಲೈನ್ ದುರಸ್ತಿಗೊಳಿಸಿ ಸಮರ್ಪಕ ಕುಡಿಯುವ ನೀರು ಪೂರೈಸಬೇಕು. ಅನೇಕ ವರ್ಷಗಳಿಂದ ಬಂಜಾರ ಹಿಂಭಾಗ ಪ್ರದೇಶದಲ್ಲಿ ವಾಸವಾಗಿರುವ ನಿವಾಸಿಗಳಿಗೆ ವಸತಿ ಹಕ್ಕುಪತ್ರ ವಿತರಣೆ ಮಾಡಬೇಕು ಎಂದು ಒತ್ತಾಯಿಸಿದರು.
ಕರ್ನಾಟಕ ರಾಷ್ಟ್ರ ಸಮಿತಿ ಅಧ್ಯಕ್ಷ ಡಿ.ಚಂದ್ರಶೇಖರ, ನಿವಾಸಿಗಳಾದ ಎಚ್.ಸುನೀತಮ್ಮ, ಅಕ್ಕಮ್ಮ, ಚಂದ್ರಮ್ಮ, ಲಲಿತಮ್ಮ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net