ಜನವರಿಯಲ್ಲಿ ಫಲ-ಪುಷ್ಪ ಪ್ರದರ್ಶನ

FlowerShow
filter: 0; fileterIntensity: 0.0; filterMask: 0; captureOrientation: 0; algolist: 0; multi-frame: 1; brp_mask:136; brp_del_th:0.0000,0.0000; brp_del_sen:0.1300,0.0090; motionR: 0; delta:null; bokeh:0; module: photo;hw-remosaic: false;touch: (0.59936523, 0.39464316);sceneMode: 7864320;cct_value: 0;AI_Scene: (0, 0);aec_lux: 257.70337;aec_lux_index: 0;albedo: ;confidence: ;motionLevel: 0;weatherinfo: null;temperature: 30;
Published on

ತುಮಕೂರು: ತೋಟಗಾರಿಕೆ ಇಲಾಖೆ ವತಿಯಿಂದ ಪ್ರತಿ ವರ್ಷದಂತೆ ಗಣರಾಜ್ಯೋತ್ಸವ ಅಂಗವಾಗಿ ಫಲ-ಪುಷ್ಪ ಪ್ರದರ್ಶನವನ್ನು ಜನವರಿ ಕೊನೆಯಲ್ಲಿ ಆಯೋಜಿಸಲಾಗುತ್ತಿದ್ದು, ಫಲ-ಪುಷ್ಪ ಪ್ರದರ್ಶನವನ್ನು ವೈಶಿಷ್ಟ$್ಯಪೂರ್ಣವಾಗಿ ಇರಲಿ ಎಂದು ಜಿಪಂ ಸಿಇಒ ಜಿ.ಪ್ರಭು ಸೂಚನೆ ನೀಡಿದರು.

ಜಿಪಂ ಸಭಾಂಗಣದಲ್ಲಿ ಬುಧವಾರ ಫಲ-ಪುಷ್ಪ ಪ್ರದರ್ಶನ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಕೃಷಿ, ಮೀನುಗಾರಿಕೆ, ಪಶು ಸಂಗೋಪನೆ, ಅರಣ್ಯ, ರೇಷ್ಮೆ, ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕತಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಂದ ಮಾಹಿತಿಯುಕ್ತವಾದ ಮಳಿಗೆಗಳನ್ನು ತೆರೆದು ವಸ್ತುಪ್ರದರ್ಶನವನ್ನು ಏರ್ಪಡಿಸಲು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಿಂದ ಹಳ್ಳಿಯಲ್ಲಿ ಕಣ್ಮರೆಯಾಗುತ್ತಿರುವ ಆಹಾರ ಪದಾರ್ಥಗಳು ಮತ್ತು ಇಲಾಖೆಗೆ ಸಂಬಂಧಿಸಿದ ವಿಷಯಗಳ ಕುರಿತು ವಿಶೇಷ ವಸ್ತು ಪ್ರದರ್ಶನ ಏರ್ಪಡಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಮಕ್ಕಳಿಗೆ ಸಂಬಂಧಿಸಿದ ಮೌಲ್ಯಯುತ ಪುಸ್ತಕಗಳ ಪ್ರದರ್ಶನ ಏರ್ಪಡಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳಿಗೆ ನಿರ್ದೇಶಿಸಿದರು.

ಮಂದರಗಿರಿ, ಕೈದಾಳ ಚನ್ನಕೇಶವ ವಿಗ್ರಹ: ಈ ಬಾರಿಯ ಫಲ-ಪುಷ್ಟ ಪ್ರದರ್ಶನದಲ್ಲಿ ಮಂದರಗಿರಿ ದೇವಸ್ಥಾನ, ಕೈದಾಳ ಚನ್ನಕೇಶವ ಸ್ವಾಮಿ ವಿಗ್ರಹ, ಜಾನೂರ್​ ಕಲೆಯಿಂದ ರೈತ ಜೀವನ ಶೈಲಿ ಚಿತ್ರಣ, ತೆಂಗಿನಕಾಯಿ ಮತ್ತು ಅಡಕೆ ಕರಕುಶಲ ಪ್ರದರ್ಶನ, ವಿವಿಧ ರೀತಿಯ ಅಣಬೆ ಮತ್ತು ಮೈಕ್ರೋ ಗ್ರೇನ್ಸ್​ ಪ್ರದರ್ಶನ ಸೇರಿದಂತೆ ವಿವಿಧ ರೀತಿಯ ವಿಶೇಷ ಹಣ್ಣು, ತರಕಾರಿ ಮತ್ತು ಹೂವುಗಳ ಪ್ರದರ್ಶನವನ್ನು ಏರ್ಪಡಿಸಲಾಗುವುದು ಎಂದು ತೋಟಗಾರಿಕೆ ಇಲಾಖೆ ಉಪ ನಿರ್ದೇಶಕಿ ಶಾರದಮ್ಮ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net