ಎಫ್‌ಎಂಸಿ ಕಾಲೇಜಿನಲ್ಲಿ ಯೋಗ ದಿನಾಚರಣೆ

21mdk06
Published on

ಮಡಿಕೇರಿ:

ಯೋಗಾಭ್ಯಾಸದಿಂದ ದೈಹಿಕ ಕ್ಷಮತೆಯನ್ನು ಪಡೆದುಕೊಳ್ಳಬಹುದು. ಆ ಮೂಲಕ ಶಿಸ್ತುಬದ್ಧ ಬದುಕನ್ನು ನಡೆಸಲು ಸಾಧ್ಯವಾಗುತ್ತದೆ. ಭಾರತೀಯ ಪರಂಪರೆಯಲ್ಲಿ ಯೋಗಾಭ್ಯಾಸಕ್ಕೆ ಮಹತ್ತರವಾದ ಸ್ಥಾನವಿದೆ ಎಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಪ್ರಾಂಶುಪಾಲ ಮೇ.ಪ್ರೊ. ಬಿ.ರಾಘವ ಅಭಿಪ್ರಾಯಪಟ್ಟರು. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸ್ನಾತಕೋತ್ತರ (ಡಿಪ್ಲೊಮ) ಯೋಗ ವಿಜ್ಞಾನ ವಿಭಾಗ, ಎನ್‌ಸಿಸಿ, ಎನ್‌ಎಸ್‌ಎಸ್ ಹಾಗೂ ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ಅಂತರಾಷ್ಟ್ರೀಯ ಯೋಗದಿನವನ್ನು ಬುಧವಾರ ಕಾಲೇಜಿನಲ್ಲಿ ಸಂಭ್ರಮದಿAದ ಆಚರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಮಡಿಕೇರಿಯ ಕರ್ನಾಟಕ 19 ನೇ ಬೆಟಾಲಿಯನ್ ಆಡಳಿತ ಅಧಿಕಾರಿ ಲೆಫ್ಟಿನೆಂಟ್ ಕರ್ನಲ್ ಚಾಕೋ ವಿ.ಡಿ ಮತ್ತು ಮಡಿಕೇರಿ ಕೆನರಾ ಬ್ಯಾಂಕ್ ಪಶ್ಚಿಮ ಶಾಖೆ ವ್ಯವಸ್ಥಾಪಕ ಪಿ.ಕೆ.ಅವಿನಾಶ್ ಅವರು ಆಗಮಿಸಿದ್ದರು.
ಪ್ರಾಯೋಗಿಕ ಯೋಗಾಭ್ಯಾಸದಲ್ಲಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜಕ ಡಾ. ಗಾಯತ್ರಿ ಉಪಸ್ಥಿತರಿದ್ದರು. ಪ್ರಾಣಿಶಾಸ್ತç ವಿಭಾಗದ ಮುಖ್ಯಸ್ಥರು ಹಾಗೂ ಸ್ನಾತಕೋತ್ತರ (ಡಿಪ್ಲೊಮ) ಯೋಗವಿಜ್ಞಾನ ವಿಭಾಗದ ಸಂಯೋಜಕ ಡಾ.ಎಂ.ಪಿ.ಕೃಷ್ಣ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net