

ಬೆಳಗಾವಿ; ರಾಜ್ಯಾದ್ಯಂತ ಎಲ್ಲ ಫಲಾನುಭವಿಗಳಿಗೆ ನಿಗಧಿತ ಸಮಯದಲ್ಲಿ ಗೃಹಲಕ್ಷ್ಮೀ ಹಣ ಬಿಡುಗಡೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆಲಕ್ಷ್ಮೀ ಹೆಬ್ಬಾಳ್ಕರ ಭರವಸೆ ನೀಡಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ವಿರೋಧ ಪಕ್ಷಗಳು ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಸುಖಾಸುಮ್ಮನೆ ಅಪಪ್ರಚಾರ ಮಾಡುತ್ತಿವೆ. ಇನ್ನು 8 ದಿನಗಳಲ್ಲಿ ಯಜಮಾನಿಯರ ಖಾತೆಗೆ ಹಣ ಸಂದಾಯವಾಗಲಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.