

ನೆಲಮಂಗಲ: ಗ್ರಾಮ ಪಂಚಾಯಿತಿ ಚುನಾವಣೆಯನ್ನು ಶಾಂತಿಯುತವಾಗಿ ನಡೆಸುವತ್ತ ಚುನಾವಣಾಧಿಕಾರಿಗಳು ಗಮನಹರಿಸಬೇಕು ಎಂದು ಗ್ರಾಮಾಂತರ ಜಿಲ್ಲಾ ಚುನಾವಣಾ ವೀಕ್ಷಕ ಎಚ್.ವಿ.ಚಂದ್ರಕಾಂತ್ ಸೂಚಿಸಿದರು.
ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ತರಬೇತಿ ಕಾರ್ಯಾಗಾರ ಉದ್ದೇಶಿಸಿ ಮಾತನಾಡಿದರು.
ಈ ಬಾರಿ ಚುನಾವಣೆಯಲ್ಲಿ ಹೆಚ್ಚು ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಚುನಾವಣೆಯಲ್ಲಿ ಅಕ್ರಮ ನಡೆಯದಂತೆ ಎಚ್ಚರಿಕೆ ವಹಿಸಬೇಕಿದೆ. ಮತದಾರರ ದಾಖ ಪರೀಕ್ಷಿಸಿ ಆರ್ಹ ಮತದಾರರಿಗೆ ಅವಕಾಶ ಮಾಡಿಕೊಡಬೇಕು. ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಮಾಹಿತಿ ನೀಡಬೇಕು. ಮತದಾರರೊಂದಿಗೆ ಮತಗಟ್ಟೆಯ ಅಧಿಕಾರಿಗಳು ತಾಳ್ಮೆಯಿಂದ ವರ್ತಿಸಿ ಶಾಂತಿಯುತ ಚುನಾವಣೆಗೆ ಅವಕಾಶ ಮಾಡಿಕೊಡಬೇಕು. ಆರೋಗ್ಯ ಸಮಸ್ಯೆ ಇರುವ ಅಧಿಕಾರಿಗಳು ಅವಶ್ಯವಿರುವ ಔಷಧ ತಗೆದುಕೊಂಡು ಹೋಗಬೇಕು. ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಬೇಕು ಎಂದರು.
ತಹಸೀಲ್ದಾರ್ ಎಂ.ಶ್ರೀನಿವಾಸ್ ಮಾತನಾಡಿ, ಜಿಲ್ಲಾಡಳಿತ ನಿರ್ದೇಶನದಂತೆ 220 ಪಿಆರ್‌ಒ ಮತ್ತು 220 ಎಪಿಆರ್‌ಒಗಳಿಗೆ ತರಬೇತಿ ನೀಡಲಾಡಲಾಗಿದೆ ಎಂದು ಮಾಹಿತಿ ನೀಡಿದರು.
ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ಚುನಾವಣಾಧಿಕಾರಿಗಳಿಗೆ ಆಯೋಜಿಸಿದ್ದ ತರಬೇತಿ ಕಾರ್ಯಗಾರದಲ್ಲಿ ಕೋವೀಡ್-19 ಮುಂಜಾಗ್ರತ ಕ್ರಮ ಅನುಸರಿಸಿಲ್ಲ ಎಂದು ಶಿಕ್ಷಕಿಯೊಬ್ಬರು ಆರೋಪಿಸಿದರು.
ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್‌ನಾಯಕ್, ಶಿರಸ್ತೇದಾರ್ ಎಂ.ವಿ.ಮಂಜುನಾಥ್, ರಾಜಸ್ವನಿರೀಕ್ಷಕ ರವಿ ಕುಮಾರ್, ಆಶ್ವಥ್, ಕ್ಷೇತ್ರಶಿಕ್ಷಣಾಧಿಕಾರಿ ಕೆ.ಸಿ.ರಮೇಶ್ ಹಾಗೂ ಇತರರು ಇದ್ದರು.