ಮಕ್ಕಳ ಶಿಕ್ಷಣ ಕಡೆಗೆ ಗಮನ ಹರಿಸಲಿ

Kundukorate
Published on

ರೋಣ: ತಾಲೂಕಿನ ಕೊತಬಾಳ ಗ್ರಾಮದ ದಲಿತ ಕಾಲನಿಯಲ್ಲಿ ಇತ್ತೀಚೆಗೆ ಎಸ್‌ಸಿ, ಎಸ್‌ಟಿ ಕುಂದುಕೊರತೆ ಸಭೆ ಏರ್ಪಡಿಸಲಾಗಿತ್ತು.

ಪಿಎಸ್‌ಐ ಎಲ್.ಕೆ. ಜೂಲಕಟ್ಟಿ ಮಾತನಾಡಿ, ದಲಿತ ಮಕ್ಕಳಲ್ಲಿ ಶಿಕ್ಷಣದ ಕೊರತೆ ಕಂಡು ಬರುತ್ತಿದೆ. ಪಾಲಕರು ಇದನ್ನು ಗಂಭೀರವಾಗಿ ಪರಿಗಣಿಸಿ ಮಕ್ಕಳ ಶಿಕ್ಷಣದ ಕಡೆಗೆ ಗಮನ ಹರಿಸಬೇಕು ಎಂದರು.

ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಯುವಕರು ಮದ್ಯದ ದಾಸರಾಗುತ್ತಿದ್ದಾರೆ. ಇದರಿಂದ ಎಷ್ಟೋ ಕುಟುಂಬಗಳು ಬೀದಿಪಾಲಾಗಿವೆ. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಅಕ್ರಮವಾಗಿ ಮದ್ಯ ಮಾರಾಟ ಮಾಡುವವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು. ಸೋಮು ನಾಗರಾಜ, ಹಣಮಪ್ಪ ಅಸೂಟಿ, ಹನಮಂತ ಗೌಡ ಪಾಟೀಲ,ಯಮನೂರಪ್ಪ ಮಾದರ, ಸುರೇಶ ಐಹೊಳ್ಳಿ, ಶರಣಪ್ಪ ನಾಗರಾಜ, ಶಿವಪ್ಪ ಮಾದರ, ಯಲ್ಲಪ್ಪ ಗಚಿನಮನಿ, ನಾಗರಾಜ ಸಂದಿಮನಿ ಇತರರು ಇದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net