ಶಿಕ್ಷಣದ ಜತೆಗೆ ಸಾಂಸ್ಕೃತಿಕ ಚಟುವಟಿಕೆ ಕಡೆಗೆ ಗಮನ ಹರಿಸಿ : ವಿದ್ಯಾರ್ಥಿಗಳಿಗೆ ನಟ ಪ್ರೇಮ್ ಕಿವಿಮಾತು

atme
Published on

ಮೈಸೂರು: ಶಿಕ್ಷಣದ ಜತೆಗೆ ಸಾಂಸ್ಕೃತಿಕ ಚಟುವಟಿಕೆಯ ಕಡೆಗೂ ವಿದ್ಯಾರ್ಥಿಗಳು ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ‘ನೆನಪಿರಲಿ’ ಖ್ಯಾತಿಯ ನಟ ಪ್ರೇಮ್ ಹೇಳಿದರು.

ನಗರದ ಹೊರವಲಯದ ಬನ್ನೂರು ರಸ್ತೆಯ ಎಟಿಎಂಇ ಇಂಜಿನಿಯರಿಂಗ್ ಕಾಲೇಜಿನಲ್ಲಿ ಶನಿವಾರ ಕಾಲೇಜಿನ ವಾರ್ಷಿಕ ಸಾಂಸ್ಕೃತಿಕ ಹಬ್ಬದಲ್ಲಿ ಪಾಲ್ಗೊಂಡು ಮಾತನಾಡಿ, ಚಿತ್ರರಂಗದಲ್ಲಿರುವ ಸಾಕಷ್ಟು ಜನರು ಇಂಜಿನಿಯರಿಂಗ್ ಶಿಕ್ಷಣ ಪಡೆದು ಬಂದವರಾಗಿದ್ದಾರೆ. ಅದೇ ರೀತಿ ಈ ಕಾಲೇಜಿನಿಂದ ಕಲಾವಿದರು ಹೊರ ಹೊಮ್ಮಬೇಕು ಎಂದು ಆಶಯ ವ್ಯಕ್ತಪಡಿಸಿದರು.

ಸಮಾಜ ಸೇವಕ ಬನ್ನೂರು ಮಹೇಂದ್ರ ಸಿಂಗ್ ಕಾಳಪ್ಪ, ಪ್ರೇಮ್ ಪತ್ನಿ ಜ್ಯೋತಿ, ರಂಗರಾವ್ ಆ್ಯಂಡ್ ಸನ್ಸ್ ಸಂಸ್ಥೆಯ ಅಧ್ಯಕ್ಷ ಆರ್. ಗುರು, ಕೃಷ್ಣ ಗ್ರೂಪ್ ಆಫ್ ಹಾಸ್ಪಿಟಲ್ನ ಮ್ಯಾನೇಜಿಂಗ್ ಟ್ರಸ್ಟಿ ಡಾ.ಸುರೇಶ್ ಶೆಟ್ಟಿ, ರಾಜ್ಯ ಸರ್ಕಾರದ ಆಯುರ್ವೇದ ಸೆಂಟರ್‌ನ ಸಹಾಯಕ ನಿರ್ದೇಶಕ ಡಾ. ಲಕ್ಷ್ಮೀನಾರಾಯಣ್ ಶೆಣೈ, ಎಟಿಎಂಇ ಇಂಜಿನಿಯರಿಂಗ್ ಕಾಲೇಜಿನ ಅಧ್ಯಕ್ಷ ಎಲ್. ಅರುಣ್ ಕುಮಾರ್, ಕಾರ್ಯದರ್ಶಿ ಕೆ. ಶಿವಶಂಕರ್, ಖಜಾಂಚಿ ಆರ್. ವೀರೇಶ್, ಪ್ರಾಂಶುಪಾಲ ಡಾ. ಎಲ್ ಬಸವರಾಜ್, ಉಪನ್ಯಾಸಕರಾದ ರೋಹಿತ್, ಶಾರದಾದೇವಿ ಹಾಗೂ ಇನ್ನಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net