

ಬೆಳಗಾವಿ: ಜಿಲ್ಲೆಯ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾಗಿ ಮಲ್ಲಿಕಾರ್ಜುನ ಅಧಿಕಾರ ಸ್ವೀಕರಿಸಿದರು.
ಈ ಹಿಂದೆಜಂಟಿ ನಿರ್ದೇಶಕರಾಗಿದ್ದ ಶ್ರೀಶೈಲ್ ಕಂಕಣವಾಡಿ ಅವರು ಬಾಗಲಕೋಟೆ ಜಿಲ್ಲೆಗೆ ವರ್ಗಾವಣೆಗೊಂಡಿದ್ದಾರೆ.
ವಿಜಯನಗರ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಲ್ಲಿಕಾರ್ಜುನ ಅವರನ್ನು ಬೆಳಗಾವಿ ಜಿಲ್ಲೆಗೆ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿತ್ತು.
ನೂನತ ಉಪನಿರ್ದೇಶಕ ಮಲ್ಲಿಕಾರ್ಜುನ ಅವರಿಗೆ ನಿಕಟಪೂರ್ವ ಜಂಟಿ ನಿರ್ದೇಶಕ ಶ್ರೀಶೈಲ್ ಕಂಕಣವಾಡಿ ಅವರು ಅಧಿಕಾರ ಹಸ್ತಾಂತರಿಸಿ ಶುಭ ಕೋರಿದರು.
***