ಜನಪದ ಕಲಾವಿದರ ನಿರ್ಲಕ್ಷ್ಯ ಸಲ್ಲ

22sor2
ಸೊರಬದಲ್ಲಿ ಏರ್ಪಡಿಸಿದ್ದ ವಿಶ್ವ ಜಾನಪದ ದಿನಾಚರಣೆ ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಶಂಕರ್ ಶೇಟ್ ಉದ್ಘಾಟಿಸಿದರು. ಮಂಜುನಾಥ್, ಉಮೇಶ್, ವಿಜಯ್‌ಕುಮಾರ್ ಇತರರಿದ್ದರು.
Published on

ಸೊರಬ: ಆಧುನಿಕ ಜೀವನ ಶೈಲಿಯಲ್ಲಿ ಮಾನವೀಯತೆ ಕಾಣೆಯಾಗಿ ತಾರತಮ್ಯ ಭಾವನೆ ಹೆಚ್ಚಾಗುತ್ತಿದೆ. ಜಾನಪದ ಕಲಾವಿದರನ್ನು ಈಗಲೂ ಅಸಡ್ಡೆಯಿಂದ ನೋಡುತ್ತಿರುವುದು ಬೇಸರದ ಸಂಗತಿ ಎಂದು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಅಧ್ಯಕ್ಷ ಶಂಕರ್ ಶೇಟ್ ಹೇಳಿದರು.

ಪಟ್ಟಣದ ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಸಾಂಸ್ಕÈತಿಕ ವೇದಿಕೆ ಹಾಗೂ ಪ್ಯಾರಾ ಮೆಡಿಕಲ್ ಕಾಲೇಜಿನಿಂದ ಹಮ್ಮಿಕೊಂಡಿದ್ದ ವಿಶ್ವ ಜಾನಪದ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಶ್ರಮಿಕ ವರ್ಗದ ನೋವು, ನಲಿವು ಹಾಗೂ ಅವರ ಬದುಕಿನ ಕ್ರಮವನ್ನು ಜಾನಪದ ಸಾಹಿತ್ಯದಲ್ಲಿ ಕಾಣಬಹುದು. ಕಲಾವಿದರಿಗೆ ಸಾಕಷ್ಟು ಸಮಸ್ಯೆ, ಸವಾಲುಗಳಿವೆ. ನಮ್ಮ ಸಂಸ್ಕೃತಿಗೆ ಜನಪದವೇ ಮೂಲ. ಶ್ರಮದ ದಣಿವಿನ ನಿವಾರಣೆಗಾಗಿ ಹುಟ್ಟಿಕೊಂಡ ಹಾಡು, ಕುಣಿತ ಹಾಗೂ ವಾದ್ಯ ಸಂಗೀತ ಇಂದು ಜನಪದ ಕಲಾ ಪ್ರಕಾರಗಳಾಗಿ ಪ್ರದರ್ಶಿಸಲ್ಪಡುತ್ತಿವೆ ಎಂದರು.
ಉಪನ್ಯಾಸಕ ಭೀಮಪ್ಪ ಮಾತನಾಡಿ, ನಮ್ಮ ಮೂಲ ಸಂಸ್ಕೃತಿ ಜನಪದವನ್ನು ಯುವಜನತೆ ಪೋಷಿಸಿ ಬೆಳೆಸಬೇಕು. ಗಾದೆಗಳು, ಒಗಟುಗಳು ಜನ ಜೀವನವನ್ನು ಸುಧಾರಿಸುವಲ್ಲಿ ಮಹತ್ತರ ಪಾತ್ರ ವಹಿಸುತ್ತವೆ ಎಂದು ಹೇಳಿದರು.
ವನಸುಮಾ ಕಲಾ ಬಳಗದಿಂದ ಗೀತಗಾಯನ ಕಾರ್ಯಕ್ರಮ ನಡೆಯಿತು. ಸೊರಬದಲ್ಲಿ ವಿಶ್ವ ಜಾನಪದ ದಿನಾಚರಣೆ ಕಾರ್ಯಕ್ರಮದಲ್ಲಿ ಕಲಾವಿದರನ್ನು ಸನ್ಮಾನಿಸಲಾಯಿತು. ಪ್ರಾಚಾರ್ಯ ಮಂಜುನಾಥ್, ಉಪನ್ಯಾಸಕ ಡಾ. ಉಮೇಶ್ ಭದ್ರಾಪುರ, ವಿಜಯ್‌ಕುಮಾರ್ ದಟ್ಟೆರ್, ಮಹೇಶ್ ಖಾರ್ವಿ, ಮಂಜುಳಾ, ರಮೇಶ್ ಕಲ್ಲಂಬಿ, ನೇತ್ರಾ, ಉಮೇಶ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net