ಆಗಸ್ಟ್ 27ರಂದು ಜಾನಪದ ಸಮ್ಮೇಳನ: ಪೂರ್ವಭಾವಿ ಸಭೆ; ಸರ್ವಾಧ್ಯಕ್ಷರಾಗಿ ವಿದ್ವಾಂಸ ಡಾ.ಗಣನಾಥ ಎಕ್ಕಾರು

janapada
ಉಡುಪಿ ಜಿಲ್ಲಾ ಪ್ರಥಮ ಕನ್ನಡ ಜಾನಪದ ಸಮ್ಮೇಳನದ ಪೂರ್ವಭಾವಿ ಸಭೆ ಮಂಗಳವಾರ ಶ್ರೀಕೃಷ್ಣ ಮಠದ ರಾಜಾಣದಲ್ಲಿ ನಡೆಯಿತು
Published on

ವಿಜಯವಾಣಿ ಸುದ್ದಿಜಾಲ ಬೈಂದೂರು

ಕನ್ನಡ ಜಾನಪದ ಪರಿಷತ್, ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಘಟಕ, ಉಡುಪಿ ತಾಲೂಕು ಘಟಕ ಸಹಯೋಗದಲ್ಲಿ ಆಗಸ್ಟ್ 27ರಂದು ಉಡುಪಿ ಜಿಲ್ಲಾ ಪ್ರಥಮ ಕನ್ನಡ ಜಾನಪದ ಸಮ್ಮೇಳನ ನಡೆಯಲಿದ್ದು, ಇದರ ಪೂರ್ವಭಾವಿ ಸಭೆ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಮಂಗಳವಾರ ನಡೆಯಿತು.

ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ ಡಾ.ಗಣೇಶ್ ಗಂಗೊಳ್ಳಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಸುವರ್ಣ ಕಟಪಾಡಿ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿ, ಪರ್ಯಾಯ ಪುತ್ತಿಗೆ ಮಠದ ಪೀಠಾಧಿಪತಿ ಸುಗುಣೇಂದ್ರ ತೀರ್ಥ ಶ್ರೀಗಳು ಸಮ್ಮೇಳನದ ದಿವ್ಯ ಸಾನ್ನಿಧ್ಯ ವಹಿಸಲಿದ್ದು, ಜಾನಪದ ವಿದ್ವಾಂಸ ಡಾ.ಗಣನಾಥ ಎಕ್ಕಾರು ಸಮ್ಮೇಳನದ ಸರ್ವಾಧ್ಯಕ್ಷರಾಗಲಿದ್ದಾರೆ. ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಡಾ.ಎಸ್.ಬಾಲಾಜಿ ಅಧ್ಯಕ್ಷತೆ ವಹಿಸಲಿದ್ದು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಶಾಸಕ ಯಶ್‌ಪಾಲ್ ಸುವರ್ಣ, ಡಾ.ಜಿ.ಶಂಕರ್, ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಜಿಲ್ಲಾ ಯುವಜನ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ.ರೋಶನ್‌ಕುಮಾರ್ ಶೆಟ್ಟಿ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ ಬಿ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಕೆ, ಆನಂದ ಸಿ.ಕುಂದರ್, ಜಯಕರ್ ಶೆಟ್ಟಿ ಇಂದ್ರಾಳಿ, ಕನ್ನಡ ಜಾನಪದ ಪರಿಷತ್ ಉಡುಪಿ ತಾಲೂಕು ಅಧ್ಯಕ್ಷೆ ಮಾಯಾ ಕಾಮತ್ ಭಾಗವಹಿಸಲಿದ್ದಾರೆ ಎಂದರು.

ಪುತ್ತಿಗೆ ಮಠದ ದಿವಾನ ನಾಗರಾಜ ಆಚಾರ್ಯ, ವಿದೇಶೀಯ ಕಾರ್ಯದರ್ಶಿ ಪ್ರಸನ್ನ ಆಚಾರ್ಯ, ಸಾಂಸ್ಕೃತಿಕ ಸಮಿತಿ ಸಂಚಾಲಕ ರಮೇಶ್ ಭಟ್ ಕೆ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಕರ್ವಾಲ್, ಉಡುಪಿ ತಾಲೂಕು ಸಂಚಾಲಕಿ ಪ್ರಭಾ ರಾವ್ ಉಪಸ್ಥಿತರಿದ್ದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net