ಜಾನಪದ ಪರಿಷತ್‌ನಿಂದ ಜಾನಪದ ದಸರಾ

Folk Dussehra by Folk Parishad
Published on

ಮಡಿಕೇರಿ:

ಕೊಡಗು ಜಿಲ್ಲಾ ಜಾನಪದ ಪರಿಷತ್ ವತಿಯಿಂದ ಅ 10 ರಂದು ಜಾನಪದ ದಸರಾ ಕಾರ್ಯಕ್ರಮವನ್ನು ಮಡಿಕೇರಿ ದಸರಾ ಉತ್ಸವದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ. ಅನಂತಶಯನ ಮತ್ತು ಜಾನಪದ ದಸರಾ ಸಂಚಾಲಕ ಅನಿಲ್ ಹೆಚ್.ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಳೆದ 4 ವರ್ಷಗಳಿಂದ ಮಡಿಕೇರಿ ದಸರಾ ಉತ್ಸವದಲ್ಲಿ ಕರ್ನಾಟಕ ಜಾನಪದ ಪರಿಷತ್ ಸಹಯೋಗದಲ್ಲಿ ಕೊಡಗು ಜಿಲ್ಲಾ ಜಾನಪದ ಪರಿಷತ್ ವತಿಯಿಂದ ಕರ್ನಾಟಕ ಕೊಡವ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿ, ಕರ್ನಾಟಕ ಅರೆಭಾಷಾ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿ, ಕರ್ನಾಟಕ ಬ್ಯಾರಿ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿ ಸಹಯೋಗದಲ್ಲಿ ಆಯೋಜಿಸಲಾಗುತ್ತಿರುವ ಜಾನಪದ ದಸರಾದಲ್ಲಿ ಈ ವರ್ಷವೂ ಕೊಡಗಿನ ಜಾನಪದ ಕಲಾವಿದರಿಗೆ ಕಲಾಪ್ರದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ. ಅ 10 ರಂದು ಗುರುವಾರ ಬೆಳಗ್ಗೆ 10 ಗಂಟೆಯಿAದ ಸಂಜೆ 4 ಗಂಟೆಯವರೆಗೆ ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ಜಾನಪದ ದಸರಾ ಕಾರ್ಯಕ್ರಮಗಳು ನಡೆಯುತ್ತವೆ ಎಂದೂ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ,

ಜಾನಪದ ದಸರಾದಲ್ಲಿ ಕಲಾ ಪ್ರದರ್ಶನ ನೀಡಲಿಚ್ಚಿಸುವ ಕಲಾವಿದರು, ಕಲಾತಂಡಗಳು ಈ ತಿಂಗಳ 25 ರೊಳಗಾಗಿ ಅರ್ಜಿಗಳನ್ನು ಅಧ್ಯಕ್ಷರು, ಕೊಡಗು ಜಾನಪದ ಪರಿಷತ್, ಕೇರಾಫ್ ಶಕ್ತಿ ದಿನಪತ್ರಿಕೆ, ಕೈಗಾರಿಕಾ ಬಡಾವಣೆ, ಮಡಿಕೇರಿ - 571201 ಇಲ್ಲಿಗೆ ಕಳುಹಿಸಬೇಕು. ಜಾನಪದ ದಸರಾ ಸಂಬAಧಿತ ಹೆಚ್ಚಿನ ಮಾಹಿತಿಗೆ ಸಂಪರ್ಕ ಸಂಖ್ಯೆಗಳು - 9886181613, ಎಸ್ ಐ ಮುನೀರ್ ಅಹಮ್ಮದ್ , 94486 14999 ಪ್ರಧಾನ ಕಾರ್ಯದರ್ಶಿ, ಎಸ್. ಎಸ್. ಸಂಪತ್ ಕುಮಾರ್, ಖಜಾಂಜಿ, ಕೊಡಗು ಜಿಲ್ಲಾ ಜಾನಪದ ಪರಿಷತ್.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net