ಕೋನಸಾಗರದಲ್ಲಿ ಜಾನಪದ ಉತ್ಸವ

NY Gopalakrishna
Published on

ಕೊಂಡ್ಲಹಳ್ಳಿ: ಕೋನಸಾಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಡಿನಾಡು ಸಾಂಸ್ಕೃತಿಕ ಜಾನಪದ ಉತ್ಸವ ಸೆ.16ರ ಬೆಳಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ.

ಕರ್ನಾಟಕ ಗಡಿ ಅಬಿವೃದ್ಧಿ ಪ್ರಾಧಿಕಾರ, ಬೇವಿನಹಳ್ಳಿಯ ವೆಂಕಟೇಶ್ವರ ಗ್ರಾಮೀಣ ಕ್ರೀಡೆ ಮತ್ತು ಸಾಂಸ್ಕೃತಿಕ ಸಂಘ ಸಂಯುಕ್ತಶ್ರಾಯದಲ್ಲಿ ಆಯೋಜಿಸಲಾಗಿದೆ.

ಶಾಸಕ ಎನ್.ವೈ.ಗೋಪಾಲಕೃಷ್ಣ ಉದ್ಘಾಟಿಸಲಿದ್ದು, ಗ್ರಾಪಂ ಅಧ್ಯಕ್ಷ ರಾಮಮೂರ್ತಿ ಅಧ್ಯಕ್ಷತೆ ವಹಿಸುವರು. ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ತಹಸೀಲ್ದಾರ್ ಎಂ.ವಿ.ರೂಪಾ, ಕನ್ನಡ ಸಂಸ್ಕೃತಿ ಇಲಾಖೆಯ ಡಿಡಿ ಎಸ್.ಕೆ.ಮಲ್ಲಿಕಾರ್ಜುನ್, ಪ್ರಕಾಶ್ ಮತ್ತಿಹಳ್ಳಿ, ನರೇನಹಳ್ಳಿ ಅರುಣ್‌ಕುಮಾರ್, ಟಿ.ರೇವಣ್ಣ ಇತರರು ಪಾಲ್ಗೊಳ್ಳಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net