

ಗುಂಡ್ಲುಪೇಟೆ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಸಾಂಸ್ಕೃತಿಕ ವೇದಿಕೆ ಮತ್ತು ಐಕ್ಯೂಎಸಿ ಸಹಯೋಗದೊಂದಿಗೆ ಜಾನಪದ ಸುಗ್ಗಿ ಸಂಭ್ರಮ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಬಿ.ಕುಮಾರಸ್ವಾಮಿ ಉದ್ಘಾಟಿಸಿ ಮಾತನಾಡಿ, ಕಾಲೇಜಿನ ವಿದ್ಯಾರ್ಥಿಗಳು ಜಾನಪದ ಸಂಸ್ಕೃತಿಯನ್ನು ಉಳಿಸಿ, ಬೆಳೆಸುವ ಆಶಯದೊಂದಿಗೆ ಜಾನಪದ ಸಾಂಸ್ಕೃತಿಕ ಕಾರ್ಯಕ್ರಮಗಳು, ಜಾನಪದ ವಸ್ತುಪ್ರದರ್ಶನ ಮತ್ತು ದೇಸಿ ಆಟಗಳನ್ನುಆಯೋಜಿಸಿರುವುದು ಶ್ಲಾಘನೀಯ ಎಂದರು.
ಕಾರ್ಯಕ್ರಮದಲ್ಲಿ ಇತಿಹಾಸ ಸಹ ಪ್ರಾಧ್ಯಾಪಕ ರಮೇಶ, ಸಾಂಸ್ಕೃತಿಕ ಸಮಿತಿ ಸಂಚಾಲಕಿ ಎಸ್.ಎಸ್.ಲಕ್ಷ್ಮೀ, ಐಕ್ಯೂಎಸಿ ಸಂಚಾಲಕ ವಿಜಯಕುಮಾರ್, ಕಚೇರಿ ಅಧೀಕ್ಷಕ ಪುಟ್ಟಬುದ್ದಿ, ಪೃಥ್ವಿರಾಜ್, ವಿದ್ಯಾರ್ಥಿಗಳು ಇದ್ದರು.