ಜನಪದ ಕಲಾ ಉತ್ಸವ ನಾಳೆ

folk
Published on

ದಾವಣಗೆರೆ: ನಗರದ ಕುವೆಂಪು ಕನ್ನಡ ಭವನದಲ್ಲಿ ಆ. 19 ರಂದು ಜನಪದ ಕಲಾ ಉತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅನುದಾನಮ್ ಚಾರಿಟೆಬಲ್ ಟ್ರಸ್ಟ್ ಮುಖ್ಯ ಟ್ರಸ್ಟಿ ಎಲ್. ಕುಬೇರನಾಯ್ಕ ಹೇಳಿದರು.

ನಶಿಸಿ ಹೋಗುತ್ತಿರುವ ಜನಪದ ಕಲೆಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಅನುದಾನಮ್ ಚಾರಿಟೆಬಲ್ ಟ್ರಸ್ಟ್ ಹಾಗೂ ಇತರ ಸಂಘಟನೆಗಳ ಸಹಯೋಗದಲ್ಲಿ ಉತ್ಸವ ಆಯೋಜಿಸಲಾಗಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಶನಿವಾರ ಬೆಳಗ್ಗೆ 11 ಗಂಟೆಗೆ ಎಸ್.ಎಸ್. ಕೇರ್ ಟ್ರಸ್ಟ್ ಲೈಫ್ ಟ್ರಸ್ಟಿ ಡಾ.ಪ್ರಭಾ ಮಲ್ಲಿಕಾರ್ಜುನ್ ಕಾರ್ಯಕ್ರಮ ಉದ್ಘಾಟಿಸುವರು, ಶಾಸಕರಾದ ಕೆ.ಎಸ್. ಬಸವಂತಪ್ಪ, ಬಿ. ದೇವೇಂದ್ರಪ್ಪ, ಕೃಷ್ಣನಾಯ್ಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದರು.

ಕಲ್ಬುರ್ಗಿ, ವಿಜಯನಗರ, ಚಿಕ್ಕಮಗಳೂರು ಹಾಗೂ ದಾವಣಗೆರೆ ಜಿಲ್ಲೆಯ ಕಲಾವಿದರು ಜನಪದ ಕಲೆಗಳ ಪ್ರದರ್ಶನ ನಡೆಸಿಕೊಡಲಿದ್ದಾರೆ ಎಂದು ತಿಳಿಸಿದರು.

ತಿಮ್ಮೇಶ್‌ನಾಯ್ಕ, ರಮೇಶ್‌ನಾಯ್ಕ, ಬೆಂಡಿಗೇರಿ ರಾಜಶೇಖರ್, ಎಸ್. ನಂಜಾನಾಯ್ಕ ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net