ಕೃಷಿಯಲ್ಲಿ ಆಧುನಿಕ ಪದ್ಧತಿ ಅನುಸರಿಸಿ

thotagake dinacharane
ಚಿಕ್ಕಮಗಳೂರು ತೋಟಗಾರಿಕೆ ಇಲಾಖೆ ಕಚೇರಿಯಲ್ಲಿ ಆಯೋಜಿಸಿದ್ದ ತೋಟಗಾರಿಕೆ ದಿನಾಚರಣೆಯಲ್ಲಿ ಶಾಸಕ ಎಚ್.ಡಿ.ತಮ್ಮಯ್ಯ ರೈತರಿಗೆ ತೆಂಗಿನ ಸಸಿಗಳನ್ನು ವಿತರಿಸಿದರು. ಪೂರ್ಣಿಮಾ, ಮಂಜೇಗೌಡ ಇತರರಿದ್ದರು.
Published on

ಚಿಕ್ಕಮಗಳೂರು: ಆಧುನಿಕ ಪದ್ಧತಿಯಲ್ಲಿ ರೈತರು ಕೃಷಿ ಮಾಡಿದರೆ ಆದಾಯ ಹೆಚ್ಚಾಗುತ್ತದೆ. ಕಾಲಕ್ಕೆ ತಕ್ಕಂತೆ ಹಾಗೂ ಆಧುನಿಕ ಪದ್ಧತಿ ಬಗ್ಗೆ ರೈತರಿಗೆ ಅರಿವು ಮೂಡಿಸಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.

ತೋಟಗಾರಿಕೆ ಇಲಾಖೆ ಪಿತಾಮಹ ಡಾ. ಎಂ.ಎಚ್.ಮರಿಗೌಡ ಜನ್ಮದಿನದ ಅಂಗವಾಗಿ ಇಲಾಖೆಯಿಂದ ಮಂಗಳವಾರ ಹಮ್ಮಿಕೊಂಡಿದ್ದ ತೋಟಗಾರಿಕೆ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕೃಷಿಯಲ್ಲಿ ತೋಟಗಾರಿಕೆ ಉಪ ಬೆಳೆಗಳು ಇರಬೇಕಾಗುತ್ತದೆ. ಬೆಳೆಗೆ ಹೆಚ್ಚಿನ ಬೆಲೆ ಸ್ಕಿಕಿದಾಗ ರೈತರು ಸರ್ಕಾರದಿಂದ ಏನನನ್ನೂ ನಿರೀಕ್ಷಿಸುವುದಿಲ್ಲ. ತರಕಾರಿ, ಹಣ್ಣುಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸುವುದರ ಜತೆಗೆ ಬೆಲೆ ದೊರಕಿಸಲು ಕ್ರಮಕೈಗೊಳ್ಳಬೇಕು ಎಂದರು.
ತೋಟಗಾರಿಕೆ ಇಲಾಖೆಯಿಂದ ಹೊಸ ತಳಿಗಳ ಸಂಶೋಧನೆ ಆಗಬೇಕು. ರೈತರ ಕೈ ಬಲಪಡಿಸಿದರೆ ದೇಶ ಅಭಿವೃದ್ಧಿಯಾಗುತ್ತದೆ. ರೈತ ಸಂಘದ ಪದಾಧಿಕಾರಿಗಳ ಜತೆ ಈಗಾಗಲೇ ಸಭೆ ಮಾಡಿ ಸಮಸ್ಯೆಗಳ ಮಾಹಿತಿ ಪಡೆದುಕೊಳ್ಳಲಾಗಿದೆ. ಮತ್ತೊಮ್ಮೆ ಅಧಿಕಾರಿಗಳ ಸಭೆ ಮಾಡಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಹೇಳಿದರು.
ಹವಾಮಾನ ವೈಪರೀತ್ಯದಿಂದ ಆಲೂಗಡ್ಡೆ ಬೆಳೆಗೆ ಅಂಗಮಾರಿ ರೋಗ ತೀವ್ರವಾಗಿ ಕಾಡುತ್ತಿದೆ. ರೈತರು ಹಾಕಿದ ಬಂಡವಾಳ ಸಹ ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಈ ಭಾಗದಲ್ಲಿ ಕಾಫಿ, ಅಡಕೆ ಪ್ರಮುಖ ವಾಣಿಜ್ಯ ಬೆಳೆಗಳಾಗಿವೆ. ಹರಡುವ ರೋಗಗಳನ್ನು ನಿಯಂತ್ರಿಸಲು ರಿಯಾಯಿತಿ ದರದಲ್ಲಿ ಸರ್ಕಾರ ಔಷಧ ವಿತರಿಸುವಂತೆ ಒತ್ತಾಯ ಮಾಡಲಾಗುವುದು ಎಂದು ಭರವಸೆ ನೀಡಿದರು.
ರೈತರಿಗೆ ವಿವಿಧ ತಳಿಯ ಸಸಿಗಳನ್ನು ವಿತರಿಸಲಾಯಿತು. ಹಂಪಾಪುರ ಗ್ರಾಪಂ ಸದಸ್ಯ ಮಂಜೇಗೌಡ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net