

ಹೊಳೆನರಸೀಪುರ: ಜಿಲ್ಲೆಯಲ್ಲಿ ಡೆಂೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ರೋಗ ತಡೆಗಟ್ಟುವ ನಿಟ್ಟಿನಲ್ಲಿ ಸಾಂಕ್ರಾಮಿಕ ರೋಗ ಕಣ್ಗಾವಲು ಸಮಿತಿ ರಚಿಸಿಲಾಗಿದೆ. ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಮಿತಿ ನೀಡಿದ ಸಲಹೆಯನ್ನು ಪಾಲಿಸಬೇಕು ಎಂದು ತಾಲೂಕು ನೋಡಲ್ ಅಧಿಕಾರಿ ಡಾ.ನಾಗೇಶ್ ಆರಾಧ್ಯ ತಿಳಿಸಿದರು.
ತಾಲೂಕು ಕಚೇರಿ ಸಭಾಂಗಣದಲ್ಲಿ ಗ್ರೇಡ್2 ತಹಸೀಲ್ದಾರ್ ಲೋಕೇಶ್ ಅಧ್ಯಕ್ಷತೆಯಲ್ಲಿ ಗುರುವಾರ ಕರೆಯಲಾಗಿದ್ದ ಸಭೆಯಲ್ಲಿ ಮಾತನಾಡಿದರು.
ಕೀಟ ಶಾಸ್ತ್ರಜ್ಞ ರಾಜೇಶ್ ಕುಲಕರ್ಣಿ ಮಾತನಾಡಿ, ಡೆಂೆ ಲಾರ್ವಗಳು ಚರಂಡಿಯಲ್ಲಿ ಉತ್ಪತ್ತಿ ಆಗುವುದಿಲ್ಲ. ಶುದ್ಧ ನೀರಿನಲ್ಲಿ ಇವು ಉತ್ಪತ್ತಿ ಆಗುತ್ತವೆ. ಆದ್ದರಿಂದ ಮನೆಯ ಸುತ್ತ ತ್ಯಾಜ್ಯನೀರು ನಿಲ್ಲದಂತೆ ಎಚ್ಚರ ವಹಿಸಲು ಸಲಹೆ ನೀಡಬೇಕು ಎಂದು ಹೇಳಿದರು.
ಡೆಂೆ ಉಂಟುಮಾಡುವ ಸೊಳ್ಳೆಗಳು ಮಧ್ಯಾಹ್ನ ಸಮಯದಲ್ಲಿ ಕಚ್ಚುತ್ತವೆ ಈ ಬಗ್ಗೆ ಎಚ್ಚರಿಕೆ ಇರಬೇಕು ಎಂದು ಹೇಳಿದರು.
ಪುರಸಭೆ ಮುಖ್ಯಾಧಿಕಾರಿ ಮಹೇಂದ್ರ, ತಾಲೂಕು ಆರೋಗ್ಯಾಧಿಕಾರಿ ಡಾ.ರಾಜೇಶ್, ಡಾ.ರಮೇಶ್, ಸಿಡಿಪಿಒ ಜ್ಯೋತಿ, ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿ ಮಂಜುನಾಥ್, ಆರೋಗ್ಯ ಇಲಾಖೆಯ ಸಿಬ್ಬಂದಿ ಸಭೆಯಲ್ಲಿ ಭಾಗವಹಿಸಿದ್ದರು.