ರಸ್ತೆ ಸುರಾ ನಿಯಮ ಪಾಲಿಸಿ

Follow the rules of the road.
ವಿಜಯಪುರದ ಸಿದ್ಧೇಶ್ವರ ದೇವಸ್ಥಾನ ಬಳಿ ರಸ್ತೆ ಸುರಕ್ಷತಾ ಮಾಸಾಚರಣೆ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಕಾಲ್ನಡಿಗೆ ಜಾಥಾಗೆ ಎಎಸ್​ಪಿ ಶಂಕರ ಮಾರಿಹಾಳ ಹಸಿರು ನಿಶಾನೆ ತೋರಿಸಿದರು. ವಸೀಮ್​ಬಾಬಾ ಮುದ್ದೇಬಿಹಾಳ, ಎಸ್​.ಬಿ. ಕುರುಬರ, ಪಿ.ಎಸ್​. ಕೋಲಾರ ಮತ್ತಿತರರಿದ್ದಾರೆ.
Published on

ವಿಜಯಪುರ: ಸಾರ್ವಜನಿಕರು ರಸ್ತೆ ದಾಟುವಾಗ ಹಾಗೂ ವಾಹನ ಚಾಲನೆ ಮಾಡುವಾಗ ರಸ್ತೆ ಸುರಕ್ಷತಾ ನಿಯಮ ಪಾಲಿಸಬೇಕು ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್​ ವರಿಷ್ಠಾಧಿಕಾರಿ ಶಂಕರ ಮಾರಿಹಾಳ ಹೇಳಿದರು.

ರಾಜ್ಯ ಸಾರಿಗೆ ಇಲಾಖೆ ವತಿಯಿಂದ ರಸ್ತೆ ಸುರಕ್ಷತಾ ಮಾಸಾಚರಣೆ ಹಿನ್ನೆಲೆಯಲ್ಲಿ ಸಡಕ್​ ಸುರಾ ಜೀವನ ರಾ ೂಷ ವಾಕ್ಯದಡಿ ನಗರದ ಸಿದ್ಧೇಶ್ವರ ದೇವಸ್ಥಾನ ಬಳಿ ಗುರುವಾರ ಹಮ್ಮಿಕೊಂಡಿದ್ದ ಕಾಲ್ನಡಿಗೆ ಜಾಥಾಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಸಾರಿಗೆ ಹಾಗೂ ಪೊಲೀಸ್​ ಇಲಾಖೆ ಈಗಾಗಲೇ ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಹಲವು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವ ಜತೆಗೆ ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಡಲಾಗುತ್ತಿದೆ. ವಾಹನ ಚಾಲನೆ ಮಾಡುವಾಗ ಮೊಬೈಲ್​ ಫೋನ್​ ಬಳಕೆ ಮಾಡಬಾರದು. ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್​ ಧರಿಸಬೇಕು. ವಿದ್ಯಾರ್ಥಿಗಳು ರಸ್ತೆ ಸುರಕ್ಷತೆ ಬಗ್ಗೆ ಜನರಿಗೆ ತಿಳಿ ಹೇಳಬೇಕು. ವಾಹನವನ್ನು ನಿಗದಿತ ವೇಗದಲ್ಲಿ ಮಾತ್ರ ಚಲಾಯಿಸಬೇಕು ಎಂದು ಅವರು ಸಲಹೆ ನೀಡಿದರು.

ಸಿದ್ಧೇಶ್ವರ ದೇವಸ್ಥಾನದಿಂದ ಆರಂಭಗೊಂಡ ಕಾಲ್ನಡಿಗೆ ಜಾಥಾ ಗಾಂಧಿ ಚೌಕ ಮೂಲಕ ಸಂಚರಿಸಿ ಡಾ. ಬಿ.ಆರ್​. ಅಂಬೇಡ್ಕರ್​ ವೃತ್ತದವರೆಗೆ ನಡೆಯಿತು.

ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿ ವಸೀಮ್​ಬಾಬಾ ಮುದ್ದೇಬಿಹಾಳ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಎಸ್​.ಬಿ. ಕುರುಬರ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಪಿ.ಎಸ್​. ಕೋಲಾರ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎಸ್​.ಜೆ. ಬಿರಾದಾರ, ಮೋಟಾರ್​ ವಾಹನ ನಿರೀಕ್ಷಕ ರವಿ ಭಿಸೆ, ಸಂತೋಷ ಪಾಟೀಲ, ಜಿ.ಎಸ್​. ರಾಕೇಶ, ಮಹಮ್ಮದ್​ ಹುಸೇನ್​ , ವಿವಿಧ ಶಾಲಾ ವಿದ್ಯಾರ್ಥಿಗಳು ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net