ವೈಜ್ಞಾನಿಕ ಪದ್ಧತಿ ಅನುಸರಿಸಿ

ಬಳ್ಳಾರಿ ಎಪಿಎಂಸಿ ಆವರಣದಲ್ಲಿ ರೈತರ ಮೇಳವನ್ನು ಡಿಸಿ ಪ್ರಶಾಂತ ಕುಮಾರ ಮಿಶ್ರಾ ಉದ್ಘಾಟಿಸಿದರು. ಎಪಿಎಂಸಿ ಅಧ್ಯಕ್ಷ ಕಟ್ಟೇಮನಿ ನಾಗೇಂದ್ರ, ಪ್ರಮುಖರಾದ ಸಿ.ಶ್ರೀನಿವಾಸರಾವ್, ಎಚ್.ತಿಮ್ಮನಗೌಡ, ಡಿ.ತಿಪ್ಪೇಸ್ವಾಮಿ, ಶ್ರೀಹರಿ, ಮಹಾರುದ್ರಗೌಡ, ಡಾ.ರವಿಶಂಕರ್ ಇತರರಿದ್ದರು.

Published on

ಬಳ್ಳಾರಿ: ರೈತರು ಮಣ್ಣಿನ ಫಲವತ್ತತೆ ಆಧರಿಸಿ ಹೆಚ್ಚಿನ ಇಳುವರಿ ಪಡೆಯಲು ವೈಜ್ಞಾನಿಕ ಪದ್ಧತಿ ಅನುಸರಿಸಬೇಕೆಂದು ಡಿಸಿ ಪ್ರಶಾಂತ ಕುಮಾರ ಮಿಶ್ರಾ ಹೇಳಿದರು.

ನಗರದ ಎಪಿಎಂಸಿ ಆವರಣದಲ್ಲಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ, ಜಿಲ್ಲಾಡಳಿತ, ಜಿಪಂ, ಕೃಷಿ ಮತ್ತು ತೋಟಗಾರಿಕೆ ಇಲಾಖೆ, ಜಿಲ್ಲಾ ಕಾಟನ್ ಅಸೋಸಿಯೇಷನ್, ಕರ್ನಾಟಕ ರಾಜ್ಯ ಕೃಷಿ ಪರಿಕರಗಳ ಮಾರಾಟಗಾರರ ಸಂಘ, ಎಪಿಎಂಸಿ ವರ್ತಕರ ಸಂಘ ಮತ್ತು ಹತ್ತಿ ಬೆಳೆಗಾರರ ಸಹಯೋಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ರೈತರ ಮೇಳದಲ್ಲಿ ಮಾತನಾಡಿದರು. ರೈತರ ಮೇಳ ಆಯೋಜಿಸಿರುವುದು ಶ್ಲಾಘನೀಯವಾಗಿದ್ದು, ಇಂಥ ಕಾರ್ಯಕ್ರಮಗಳನ್ನು ಸದ್ಬಳಕೆ ಮಾಡಿಕೊಳ್ಳಿ ಎಂದರು.

ಬಿಡಿಸಿಸಿ ಸಂಸ್ಥೆ ಅಧ್ಯಕ್ಷ ಯಶವಂತರಾಜ ನಾಗಿರೆಡ್ಡಿ ಮಾತನಾಡಿ, ರೈತರು ಹಾಗೂ ಕೃಷಿ ಇಲ್ಲದೆ ಕೈಗಾರಿಕೆ ಮತ್ತು ಉದ್ಯಮಗಳಿಲ್ಲ. ಆದ್ದರಿಂದ ರೈತರು ಮತ್ತು ಕೃಷಿಯನ್ನು ನಮ್ಮ ಸಂಸ್ಥೆ ಪ್ರೋತ್ಸಾಹಿಸುತ್ತಿದೆ. ರೈತಣ್ಣ ಊಟ, ರೈತಣ್ಣ ಕ್ಲಿನಿಕ್, ರೈತಣ್ಣ ಹಾಸಿಗೆ ಹಾಗೂ ವಿವಿಧ ಯೋಜನೆಗಳನ್ನು ರೂಪಿಸಲಾಗಿದೆ ಎಂದು ತಿಳಿಸಿದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೆ.ಎಂ.ಸೋಮಸುಂದರ ಮಾತನಾಡಿ, ರೈತರು ಪ್ರಮಾಣೀಕೃತ ಬೀಜಗಳನ್ನು ಆಯ್ಕೆ ಮಾಡಿ ವೈಜ್ಞಾನಿಕ ಪದ್ಧತಿಯಿಂದ ಹೆಚ್ಚಿನ ಇಳುವರಿ ಪಡೆಯಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net