

ಕೆ.ಎಂ.ದೊಡ್ಡಿ: ಸಾರ್ವಜನಿಕರು ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಎಂದು ಶಾಸಕ ಕದಲೂರು ಉದಯ್ ಸಲಹೆ ನೀಡಿದರು.
ಇಲ್ಲಿನ ವಿಶ್ವೇಶ್ವರಯ್ಯ ವೃತ್ತದಲ್ಲಿ ಪೊಲೀಸ್ ಚೌಕಿ ಮತ್ತು ನವೀಕೃತ ಸಿಸಿ ಕ್ಯಾಮರಾಗಳಿಗೆ ಇತ್ತೀಚೆಗೆ ಚಾಲನೆ ನೀಡಿ ಮಾತನಾಡಿದ ಅವರು, ಕೆ.ಎಂ.ದೊಡ್ಡಿಯು ಯಾವುದೇ ತಾಲೂಕಿಗೂ ಕಮ್ಮಿ ಇಲ್ಲ ಎಂಬಂತೆ ಶರವೇಗದಲ್ಲಿ ಬೆಳೆಯುತ್ತಿದೆ. ಈ ಹಿನ್ನೆಲೆಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿದ್ದು, ಸಂಚಾರ ಸಮಸ್ಯೆ ಉಂಟಾಗುತ್ತಿದೆ. ಅದನ್ನು ತಡೆಗಟ್ಟಲು ಸಂಚಾರ ನಿಯಮಗಳನ್ನು ಪಾಲಿಸಿ ಎಂದು ಕಿವಿ ಮಾತು ಹೇಳಿದರು.
ಮದ್ದೂರು ತಾಲೂಕಿನಲ್ಲಿ ಭಾರತೀನಗರ ಅತ್ಯಂತ ಹೆಚ್ಚು ಜನಸಂಖ್ಯೆ ಹೊಂದಿದ್ದು, ವ್ಯಾಪಾರ ವಹಿವಾಟು ಹೊಂದಿರುವ ಕೇಂದ್ರವಾಗಿದೆ. ಇಲ್ಲಿ ಸಕ್ಕರೆ ಕಾರ್ಖಾನೆ, ಶಿಕ್ಷಣ ಸಂಸ್ಥೆಗಳಿದ್ದು, ನಿತ್ಯ ಸಾವಿರಾರು ವಾಹನಗಳು ಓಡಾಡುತ್ತಿದ್ದು ಸಂಚಾರ ದಟ್ಟಣೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಚೌಕಿ ನಿರ್ಮಿಸಿ ಸಂಚಾರ ಸಮಸ್ಯೆ ನಿವಾರಣೆಗೆ ಮುಂದಾಗಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಕಿವಿಮಾತು ಹೇಳೀದರು.
ಗ್ರಾಪಂ ಅಧ್ಯಕ್ಷೆ ಕೌಶಲ್ಯಾಅರ್ಕೇಶ್, ಸದಸ್ಯರಾದ ಸದಸ್ಯ ಕೆ.ಟಿ.ಶ್ರೀನಿವಾಸ್, ಕೆ.ವಿ.ಶ್ರೀನಿವಾಸ , ಜಿ.ಪಂ. ಮಾಜಿ ಸದಸ್ಯರಾದ ಚಂದೂಪುರ ಪಾಪಣ್ಣ, ಎ.ಎಸ್. ರಾಜೀವ್, ಪೊಲೀಸ್ ಇನ್ಸ್‌ಪೆಕ್ಟರ್ ಆನಂದ್, ಸಬ್ ಇನ್ಸ್‌ಪೆಕ್ಟರ್ ರಾಮಸ್ವಾಮಿ, ರಾಜೇಂದ್ರ, ಪಿಡಿಒ ಸುಧಾ, ಮುಖಂಡ ಪೂಜಾರಿ ಮಹೇಶ್ ಇತರರು ಇದ್ದರು.