

ಕೊಳ್ಳೇಗಾಲ: ಮೈಸೂರಿನಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಬೌದ್ಧ ಮಹಾ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಪಟ್ಟಣದ ಸೇರಿದಂತೆ ಗ್ರಾಮಾಂತರ ಪ್ರದೇಶದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಮತ್ತು ಬುದ್ಧ ಅನುಯಾಯಿಗಳು ಸಾಂಸ್ಕೃತಿಕ ನಗರಿಯತ್ತ ತೆರಳಿದರು.
ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ 2 ಬಸ್ ಹಾಗೂ 10 ಕಾರುಗಳಲ್ಲಿ ತೆರಳಿದರು.
ನಗರಸಭೆ ಅಧ್ಯಕ್ಷೆ ರೇಖಾ ರಮೇಶ್ ಮಾತನಾಡಿ, ಮೈಸೂರಿನಲ್ಲಿ ನಡೆಯುತ್ತಿರುವ ಬೌದ್ಧ ಮಹಾ ಸಮ್ಮೇಳನದಲ್ಲಿ ಸಾವಿರಾರು ಸಂಖ್ಯೆಯಲ್ಲಿ ವಿವಧ ಭಾಗಗಳಿಂದ ಅಂಬೇಡ್ಕರ್ ಹಾಗೂ ಬುದ್ಧನ ಅನುಯಾಯಿಗಳು ಪಾಲ್ಗೊಳ್ಳುತ್ತಿದ್ದಾರೆ. ಅಂತೆಯೆ ಕೊಳ್ಳೇಗಾಲ ಪಟ್ಟಣದ ಸೇರಿದಂತೆ ಗ್ರಾಮಾಂತರ ಪ್ರದೇಶದ ಜನರು ಸಮ್ಮೇಳನದಲ್ಲಿ ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ತೆರಳುತ್ತಿದ್ದೇವೆ ಎಂದರು.
ಡಾ.ಬಿ.ಆರ್.ಅಂಬೇಡ್ಕರ್ ಸಂಘದ ಕಾರ್ಯದರ್ಶಿ ಪಾಪಣ್ಣ, ನಗರಸಭೆ ಸದಸ್ಯರಾದ ಶಾಂತರಾಜು, ಪ್ರಕಾಶ್, ಸ್ವಾಮಿ ನಂಜಪ್ಪ, ಮಾಜಿ ಅಧ್ಯಕ್ಷ ರಮೇಶ್, ತಾ.ಪಂ ಮಾಜಿ ಉಪಾಧ್ಯಕ್ಷ ಬಸವಣ್ಣ, ಭೀಮನಗರ ಮುಖಂಡರಾದ ಸಿದ್ದಾರ್ಥ್, ಜಗದೀಶ್, ಮೂರ್ತಿ ಹಾಲಿನ ಡೈರಿ, ಮಣಿ, ಪ್ರಭುಸ್ವಾಮಿ, ಶಂಕನಪುರ ಜಗದೀಶ್, ರಮೇಶ್ (ಬಜ್ಜಿ) ಮತ್ತಿತರರಿದ್ದರು.